ನವದೆಹಲಿ: ಕರ್ನಾಟಕದ ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡದ (ಎಸ್ಟಿ) ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಗೆ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾದಿಂದ (ಆರ್ಜಿಐ) ಸಹಮತಿ ಸಿಕ್ಕಿಲ್ಲ. ಕರ್ನಾಟಕ ಸರ್ಕಾರ ಅಗತ್ಯ ದಾಖಲೆಗಳನ್ನು ಸಲ್ಲಿಸದೆ ಇರುವುದು ಇದಕ್ಕೆ ಕಾರಣ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ತಿಳಿಸಿದರು.

ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಡುವೆ ಹಲವು ಪತ್ರ ವ್ಯವಹಾರಗಳು ನಡೆದಿವೆ. ಆರ್ಜಿಐ ಅವರು ತಮ್ಮ ಅಭಿಪ್ರಾಯವನ್ನು ಸಚಿವಾಲಯಕ್ಕೆ 2017ರ ಫೆಬ್ರುವರಿ, 2019ರ ಫೆಬ್ರುವರಿ, 2022ರ ಸೆಪ್ಟೆಂಬರ್ ಹಾಗೂ 2024ರ ಫೆಬ್ರುವರಿಯಲ್ಲಿ ತಿಳಿಸಿದ್ದಾರೆ. ಈ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದರು.

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕರ್ನಾಟಕ ಸರ್ಕಾರವು 2015ರ ಆಗಸ್ಟ್ 17ರಂದು ಶಿಫಾರಸು ಮಾಡಿತ್ತು. ಯಾವುದೇ ಸಮುದಾಯವನ್ನು ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವುದಕ್ಕೆ ಅಥವಾ ಕೈ ಬಿಡುವುದಕ್ಕೆ ಹಾಗೂ ಇತರ ಪರಿಷ್ಕರಣೆಗೆ ಕೇಂದ್ರ ಸರ್ಕಾರ 1999ರಲ್ಲೇ ಕಾರ್ಯವಿಧಾನ ರೂಪಿಸಿದೆ. ಇದರ ಪ್ರಕಾರ, ಯಾವುದೇ ಪ್ರಸ್ತಾವನೆಯನ್ನು ಕುಲಶಾಸ್ತ್ರೀಯ ಅಧ್ಯಯನ ವರದಿಯೊಂದಿಗೆ ರಾಜ್ಯ ಸರ್ಕಾರ ಸಲ್ಲಿಸಬೇಕು. ಇದಕ್ಕೆ ಆರ್ಜಿಐ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಸಹಮತ ವ್ಯಕ್ತಪಡಿಸಬೇಕು. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ಆರ್ಜಿಐ ಈ ಹಿಂದೆ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು. ಆದರೆ, ರಾಜ್ಯದಿಂದ ಸ್ಪಷ್ಟ ಉತ್ತರ ಬಂದಿಲ್ಲ' ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.