ನವದೆಹಲಿ: ಕರ್ನಾಟಕದ ಕಾಡುಗೊಲ್ಲರನ್ನು (ಅಡವಿಗೊಲ್ಲ) ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು. ಸಮುದಾಯದ ಬೇಡಿಕೆ ವಿಷಯದಲ್ಲಿ ಕೇಂದ್ರ ಶೀಘ್ರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ಕಾಡುಗೊಲ್ಲರಿಗೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು. ಕಾಡುಗೊಲ್ಲರು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜ್ಯದಲ್ಲಿ ಈ ಸಮುದಾಯದ 6.5 ಲಕ್ಷ ಮಂದಿ ಇದ್ದಾರೆ.

ಕಾಡುಗೊಲ್ಲರು ಹಾಗೂ ಹಟ್ಟಿಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕರ್ನಾಟಕ ಸರ್ಕಾರವು 2015ರ ಆಗಸ್ಟ್ 17ರಂದು ಶಿಫಾರಸು ಮಾಡಿತ್ತು.

‘ಯಾವುದೇ ಸಮುದಾಯವನ್ನು ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವುದಕ್ಕೆ ಅಥವಾ ಕೈ ಬಿಡುವುದಕ್ಕೆ ಹಾಗೂ ಇತರ ಪರಿಷ್ಕರಣೆಗೆ ಕೇಂದ್ರ ಸರ್ಕಾರ 1999ರಲ್ಲೇ ಕಾರ್ಯವಿಧಾನ ರೂಪಿಸಿದೆ. ಇದರ ಪ್ರಕಾರ, ಯಾವುದೇ ಪ್ರಸ್ತಾವನೆಯನ್ನು ಸಂಬಂಧಿಸಿದ ರಾಜ್ಯ ಸರ್ಕಾರ ಸಲ್ಲಿಸಬೇಕು. ಇದಕ್ಕೆ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಸಹಮತ ವ್ಯಕ್ತಪಡಿಸಬೇಕು. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ಆರ್‌ಜಿಐ ಈ ಹಿಂದೆ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು. ಅದಕ್ಕೆ ಕರ್ನಾಟಕ ಸರ್ಕಾರ ಉತ್ತರ ನೀಡಿತ್ತು. ಈ ಪ್ರಸ್ತಾವನೆ ಸದ್ಯ ಆರ್‌ಜಿಐ ಕಚೇರಿಯಲ್ಲಿದೆ. ಆರ್‌ಜಿಐ ಶಿಫಾರಸು ಮಾಡಿದ ಬಳಿಕ ಸಚಿವ ಸಂಪುಟ ಅಗತ್ಯ ತೀರ್ಮಾನ ತೆಗೆದುಕೊಳ್ಳುತ್ತದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.