ಕಲಬುರಗಿ: ವರನಟ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಸರ್ಕಾರ ಜಾಗ ನೀಡಿರುವುದನ್ನು ಆಕ್ಷೇಪಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರದಾಳದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಡಾ.ರಾಜ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರಿಗೆ ದೂರು ನೀಡಿದರು.

‘ರಾಜ್ಕುಮಾರ್ ಕರ್ನಾಟಕ ರತ್ನ ಮತ್ತು ದೇಶದ ಆಸ್ತಿ. ಅಂಥವರ ವಿರುದ್ಧ ಚೇತನ್ ಪುಕ್ಕಟೆ ಪ್ರಚಾರಕ್ಕಾಗಿ ಪೋಸ್ಟ್ ಹಾಕಿ ಕನ್ನಡಿಗರ ಮನಸ್ಸು ನೋಯಿಸಿದ್ದಾರೆ. ಚೇತನ್, ರಾಜ್ಕುಮಾರ್ ಸಮಾಧಿ ಮುಂದೆ ನಿಂತು ನಾಡಿನ ಜನರ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ, ಗಡೀಪಾರು ಮಾಡಬೇಕು’ ಎಂದು ಡಾ.ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಆಗ್ರಹಿಸಿದರು.

‘ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಈಡಿಗ ಸಮುದಾಯ ಸೇರಿ ಕನ್ನಡಿಗರು ಹೋರಾಟ ಮಾಡಲಿದ್ದೇವೆ. ಕಲಬುರಗಿಯ ರಾಜ್ಕುಮಾರ್ ಅಭಿಮಾನಿಗಳು ಬೆಂಗಳೂರಿಗೆ ತೆರಳಿ ಹೋರಾಟ ನಡೆಸಲಿದ್ದೇವೆ’ ಎಂದು ಎಚ್ಚರಿಕೆ ನೀಡಿದರು.

ಡಾ.ರಾಜ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಸದಾನಂದ ಪೆರ್ಲ, ಉದ್ಯಮಿ ಹಾಗೂ ಬಿಲ್ಲವ ಸಂಘದ ಜಿಲ್ಲಾ ಘಟಕದ ಮುಖಂಡ ಪ್ರವೀಣ್ ಜತ್ತನ್, ಶಿವರಾಜ ಗುತ್ತೇದಾರ ಜೇವರ್ಗಿ, ಜುಬೇರ್ ಅನ್ಸಾರಿ, ಕಿಶೋರ್ ಘಂಟಿ, ಚಂದಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-34-1591159273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.