ಕಲಬುರಗಿ: ‘ಹಿಂದುಳಿದ ಕೋಲಿ, ಕಬ್ಬಲಿಗ, ಬಾರ್ಕಿ, ಮೊಗವೀರ ಹಾಗೂ ಬೆಸ್ತ ಸಮುದಾಯಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸುವ ಕುರಿತು ರಾಜ್ಯ ಸರ್ಕಾರವು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸುವ ಸಾಧ್ಯತೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.

ನಗರದ ಹೊಸ ಜೇವರ್ಗಿ ರಸ್ತೆಯ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಿವಲಿಂಗಪ್ಪ ಕಿನ್ನೂರ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಶೀಘ್ರದಲ್ಲೇ ದೆಹಲಿಗೆ ನಿಯೋಗ ಕರೆದೊಯ್ಯುವ ಕುರಿತು ಚಿಂತನೆ ನಡೆದಿದೆ’ ಎಂದು ಹೇಳಿದರು.

‘ಶೋಷಿತ ವರ್ಗಗಳ ಆಶೋತ್ತರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸುತ್ತಿದ್ದು, ಈ ಹೋರಾಟದಲ್ಲಿ ಒಬಿಸಿ ವರ್ಗಗಳು ಒಗ್ಗೂಡಬೇಕಾಗಿದೆ’ ಎಂದರು.

‘ಸಮಾಜ ನಿರ್ಮಾಣದಲ್ಲಿ ರಾಷ್ಟ್ರೀಯ ಸಮಾಜ ಪಕ್ಷದ ಅಧ್ಯಕ್ಷ ಶಿವಲಿಂಗಪ್ಪ ಕಿನ್ನೂರ ಮಹತ್ವದ ಶಕ್ತಿಯಾಗಿ ಹೊರಹೊಮ್ಮಿದ್ದಾರೆ’ ಎಂದು ಪ್ರಶಂಸಿಸಿದರು.

ರಾಷ್ಟ್ರೀಯ ಸಮಾಜ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮಹಾದೇವ ಜಾನಕರ್ ಮಾತನಾಡಿ, ‘ಮಹಾರಾಷ್ಟ್ರದಲ್ಲಿ ಪಕ್ಷಕ್ಕೆ ನಾಲ್ಕು ಶಾಸಕರು, 95 ಕಾರ್ಪೊರೇಟರ್ಗಳು ಹಾಗೂ ಗುಜರಾತ್ನಲ್ಲಿ 28 ಕಾರ್ಪೊರೇಟರ್ಗಳ ಬೆಂಬಲವಿದೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮುದಾಯದವರಾಗಿದ್ದರೂ, ಸಮುದಾಯಕ್ಕೆ ಸಂವಿಧಾನಾತ್ಮಕ ನ್ಯಾಯ ಒದಗಿಸುವಲ್ಲಿ ಸವಾಲುಗಳಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ದೆಹಲಿ ಹೈಕಮಾಂಡ್ ಪ್ರಭಾವ ಹೆಚ್ಚಿದೆ. ನಮ್ಮ ಪಕ್ಷದಲ್ಲಿ ಆ ಸಂಸ್ಕೃತಿ ಇಲ್ಲ’ ಎಂದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಾಳಕೃಷ್ಣ ಅಕ್ಕಿಸಾಗರ ಮಾತನಾಡಿದರು. ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಮುಕ್ಕಾ ಅಧ್ಯಕ್ಷತೆ ವಹಿಸಿದ್ದರು.

ಆರ್ಎಸ್ಪಿ ಎಂಪ್ಲಾಯೀಸ್ ಫೆಡರೇಷನ್ ಅಧ್ಯಕ್ಷ ಸಿದ್ಧಪ್ಪ ಅಕ್ಕಿಸಾಗರ ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿ ಅಧ್ಯಕ್ಷ ನೀಲಕಂಠ ಜಮಾದಾರ ನಿರೂಪಿಸಿದರು. ದೇವಿಂದ್ರ ಚಿಗರಳ್ಳಿ ಸ್ವಾಗತಿಸಿದರು. ಯಲ್ಲಪ್ಪ ತಳವಾರ ಅತಿಥಿಗಳನ್ನು ಪರಿಚಯಿಸಿದರು. ಶಂಕರ ಕಟ್ಟಿಸಂಗಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭೀಮಾಶಂಕರ ಡಾಂಗೆ ಪ್ರಾರ್ಥನೆ ಸಲ್ಲಿಸಿದರು.

ಶಿವಶರಣಪ್ಪ ಕೋಬಾಳ, ವಸಂತರಾವ ನರಿಬೋಳ, ಶಾಂತಪ್ಪ ಕೂಡಿ, ಸೂರ್ಯಕಾಂತ ಗುಡ್ಡೊಡಗಿ, ಸಾಬಣ್ಣ ವಡಗೇರಿ, ಚಂದ್ರಶೇಖರ ಭಂಕಲಗಿ, ಬಸವರಾಜ ಮೊರಟಗಿ, ಬಾಬುರಾವ ಬಾದನಹಳ್ಳಿ, ಶ್ಯಾಮಕುಮಾರ ಸಂಗಾವಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-34-1432948605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.