ಕಲಬುರಗಿ: ‘ನಮ್ಮ ಸಮಾಜ ಇಂದು ಕವಲು ದಾರಿಯಲ್ಲಿದೆ. ಇದನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ಶರಣಬಸವೇಶ್ವರರ ಜಾತ್ರಾ ಮೈದಾನದಲ್ಲಿ ಶರಣಬಸವಪ್ಪ ಅಪ್ಪ ವೇದಿಕೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ವಿಶೇಷ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಗುರು–ವಿರಕ್ತರು ಹೇಳಿದ್ದು ಒಂದೇ. ಬಸವಾದಿ ಶರಣರು ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿ ಎಂದರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಪಂಚಾಚಾರ್ಯರು ಹೇಳುತ್ತಾರೆ. ಮಹಾಸಭೆ ಸ್ಥಾಪನೆಯಾಗಿದ್ದೇ ಛಿದ್ರಗೊಂಡ ಸಮುದಾಯ ಒಗ್ಗೂಡಿಸಲು. ಒಗ್ಗಟ್ಟಿನಲ್ಲಿ ಬಲವಿದೆ; ಒಡಕಿನಲ್ಲಿ ದುರ್ಬಲತೆಯಿದೆ. ಹೀಗಾಗಿ ನಾವೆಲ್ಲರೂ ಒಗ್ಗೂಡಬೇಕಿದೆ’ ಎಂದರು.

‘ವಿಶ್ವಗುರು ಬಸವಣ್ಣ ಜಗತ್ತಿನ ಅದ್ಭುತ. ಜಗತ್ತಿನಲ್ಲಿ ಹೆಣ್ಣು, ಹೊನ್ನು, ಮಣ್ಣಿಗಾಗಿ ಅನೇಕ ರಕ್ತಕ್ರಾಂತಿಗಳು ನಡೆದಿವೆ. ಬಸವಣ್ಣನವರ ಅಧ್ಯಕ್ಷತೆಯಲ್ಲಿ ಸಮಾಜೋಧಾರ್ಮಿಕ ಕ್ರಾಂತಿ ನಡೆಯಿತು. ಅದು ಸಮಸಮಾಜ ನಿರ್ಮಾಣಕ್ಕೆ ನಡೆದ ಏಕೈಕ ಕ್ರಾಂತಿ ಕಲ್ಯಾಣ ಕ್ರಾಂತಿ’ ಎಂದು ಬಣ್ಣಿಸಿದರು.

‘ಬಸವಣ್ಣನವರು ಸಮಸಮಾಜ ನಿರ್ಮಾಣದ ಕನಸು ಕಂಡಿದ್ದರು. ಅದರ ಸಾಕಾರಕ್ಕೆ ಅವರು ತೋರಿದ ದಾರಿಯಲ್ಲಿ ಸಂಘಟಿತರಾಗಿ ನಡೆಯೋಣ. ವ್ಯಸನಗಳ ಮುಕ್ತ ಸಮಾಜ ನಿರ್ಮಿಸೋಣ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡೋಣ’ ಎಂದರು.

‘ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ₹742 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪ, ಮುಂದಿನ ಬಸವ ಜಯಂತಿ ಹೊತ್ತಿಗೆ ಕಾಮಗಾರಿ ಪೂರ್ಣಗೊಳಿಸಿ, ಅದನ್ನು ಲೋಕಾರ್ಪಣೆಗೊಳಿಸಲಾಗುವುದು’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

‘ಬೆಂಗಳೂರಿನಲ್ಲಿ ಮಾದಪ್ಪನ ಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಬೃಹತ್ ಜೀವವೈವಿಧ್ಯ ಉದ್ಯಾನ ₹250 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ’ ಎಂದರು.

ಸಚಿವ ಡಾ.ಶರಣಪ್ರಕಾಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್ ಅಪ್ಪ ಮಾತನಾಡಿದರು. ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಬಸವಣ್ಣನವರ ವಚನ ನುಡಿದರು.

ಸಮಿತಿಯ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಸ್ವಾಗತಿಸಿದರು.

ಬೆಳಗಾವಿ ಶಿವಾನಂದ ಶ್ರೀ, ಸಚಿವ ಶರಣಬಸಪ್ಪ ದರ್ಶನಾಪುರ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಅವಿನಾಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮುಖಂಡರಾದ ದೊಡ್ಡಪ್ಪಗೌಡ ಪಾಟೀಲ, ದತ್ತಾತ್ರೇಯ ಪಾಟೀಲ, ಚಂದು ಪಾಟೀಲ, ಶರಣಕುಮಾರ ಮೋದಿ, ರಾಜಕುಮಾರ ಪಾಟೀಲ ತೇಲ್ಕೂರ, ಪ್ರವೀಣ ಪಾಟೀಲ ಹರವಾಳ, ಅಮರನಾಥ ಪಾಟೀಲ, ಬಸವರಾಜ ದೇಶಮುಖ, ನೀಲಕಂಠ ಮೂಲಗೆ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-1152377491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.