ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲು ದಿನೇದಿನೆ ಚುರುಕು ಪಡೆಯುತ್ತಿದೆ. ಈ ಬೆನ್ನಲ್ಲೆ ಬೇಸಿಗೆ ಏಪ್ರಿಲ್ 1ರಿಂದ ಅನ್ವಯಿಸುವಂತೆ ಎರಡು ತಿಂಗಳ ಅವಧಿಗೆ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾಯಿಸಿ ಸರ್ಕಾರ ಆದೇಶಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ತಾಪಮಾನ ಹೆಚ್ಚುವುದು ಹಾಗೂ ಬಿಸಿಗಾಳಿ ಬೀಸುವುದು ವಾಡಿಕೆ. ಹೀಗಾಗಿ ಕಲಬುರಗಿ ಕಂದಾಯ ವಿಭಾಗದ ಎಲ್ಲ ಏಳು ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾಯಿಸಲಾಗಿದೆ. 2025ನೇ ಸಾಲಿನಲ್ಲೂ ಇಂಥದ್ದೇ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಅದಕ್ಕೂ ಹಿಂದಿನ ಐದು ವರ್ಷಗಳ ಅವಧಿಗೆ ಸರ್ಕಾರಿ ಕಚೇರಿಗಳ ಅವಧಿಯನ್ನು ಸರ್ಕಾರ ಬದಲಿಸಿರಲಿಲ್ಲ.

2020 ಮತ್ತು 2021ರಲ್ಲಿನ ಕೋವಿಡ್ ಸಾಂಕ್ರಾಮಿಕ ಅವಧಿಯಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ ನಿಯಮ ಅನ್ವಯವಾಗಿರಲಿಲ್ಲ. 2022ರಲ್ಲಿ ಕಚೇರಿ ಸಮಯ ಬದಲಾವಣೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ದೆಹಲಿಯಲ್ಲಿಯೂ ಕಲಬುರಗಿಯಷ್ಟೇ ತಾಪಮಾನ ಇರುತ್ತದೆ. ಅಲ್ಲಿ ಸರ್ಕಾರಿ ಕಚೇರಿಗಳು ಸಂಜೆವರೆಗೂ ತೆರೆದಿರುತ್ತವೆ ಎಂದು ಪ್ರಸ್ತಾವ ತಿರಸ್ಕರಿಸಲಾಗಿತ್ತು. 2023ರಲ್ಲಿ ರಾಜ್ಯ ವಿಧಾನಸಭಾ ಹಾಗೂ 2024ರ ಲೋಕಸಭೆಯ ಚುನಾವಣೆಯ ಕಾರಣಕ್ಕೆ ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ.

ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲತೆ ಆಗಬಾರದು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದ್ದಲ್ಲಿ ಸಮಯದ ಪರಿಮಿತಿ ಇಲ್ಲದೆ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತುರ್ತು ಸೇವೆ ಒದಗಿಸುವ ಇಲಾಖೆಗಳಾದ ಆರೋಗ್ಯ, ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಸಮಯದ ಬದಲಾವಣೆಯ ನಿಯಮ ಅನ್ವಯ ಆಗುವುದಿಲ್ಲ. ಅವುಗಳ ಕೆಲಸದ ಅವಧಿ ಎಂದಿನಂತೆಯೇ ಇರಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-34-145013689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.