ಕಲಬುರಗಿ: ಕಲಬುರಗಿ, ಬೀದರ್, ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಇಬ್ಬರು ನಿರ್ದೇಶಕರ ಆಯ್ಕೆಯನ್ನು ರದ್ದುಪಡಿಸಿದ್ದ ಕೆಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಪೀಠ ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದೆ.

‘ಚಿಂಚೋಳಿ ತಾಲ್ಲೂಕಿನ ಅಶೋಕ ಅನ್ನಾರಾವ್ ಮತ್ತು ವಿಠಲ ರೆಡ್ಡಿ ಕೃಷ್ಣರೆಡ್ಡಿ ಅವರು ಜಂಟಿ ನಿಬಂಧಕರ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದರು. ಈ ಆಯ್ಕೆಯನ್ನು ರದ್ದುಪಡಿಸಿ ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶವನ್ನು ಕೆಎಟಿ ಎತ್ತಿ ಹಿಡಿದು ಕಳೆದ ಜ. 14 ರಂದು ತಡೆಯಾಜ್ಞೆ ತೆರವುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಈ ಇಬ್ಬರೂ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ಪೀಠವು, ಮಾರ್ಚ್ 23 ರಂದು ರಿಟ್ ಅರ್ಜಿಯನ್ನು ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದಿದೆ’ ಎಂದು ದೂರುದಾರ ದಿವಾಕರರಾವ್ ಜಹಾಗೀರದಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-34-1812163829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.