ಕಲಬುರಗಿ: ನಗರದ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯಲ್ಲಿ 164 ಹುದ್ದೆಗಳು ಖಾಲಿ ಇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಜಿಮ್ಸ್ನಲ್ಲಿ 58 ಗ್ರೂಪ್ ಎ, 9 ಗ್ರೂಪ್ ಬಿ 9, ಗ್ರೂಪ್ ಸಿ 97 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಎ ವೃಂದದ ಹುದ್ದೆಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಮಾರ್ಚ್ 6ರಂದು ಅರೆ ಸರ್ಕಾರಿ ಪತ್ರದಲ್ಲಿ ನೀಡಿರುವ ನಿರ್ದೇಶನದಂತೆ ಭರ್ತಿ ಮಾಡಲು ಕ್ರಮ ವಹಿಸಲಾಗುವುದು. ವೈದ್ಯಕೀಯ ಶಿಕ್ಷಣ ಇಲಾಖೆಯ ರಾಜ್ಯ ವೇತನ ಶ್ರೇಣಿಯ ವಿವಿಧ ವೃಂದದಲ್ಲಿ ಖಾಲಿ ಇರುವ ಬಹುತೇಕ ಹುದ್ದೆಗಳು ಪದೋನ್ನತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳಾಗಿದ್ದು, ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ ಪೂರ್ಣಗೊಂಡ ನಂತರ ಈ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಾನುಸಾರ ಕ್ರಮ ವಹಿಸಲಾಗುವುದು. ಗ್ರೂಪ್ ಡಿ ವೃಂದದ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಮೂಲಕ ಭರ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಮ್ಸ್ನಲ್ಲಿ ಚೀಟಿಗಳನ್ನು ಪಡೆಯಲು ನೆಲಮಹಡಿಯಲ್ಲಿ 14 ಕೌಂಟರ್ಗಳನ್ನು ತೆರೆಯಲಾಗಿದೆ. ಮೂರನೇ ಮಹಡಿಯಲ್ಲಿ ಐದು ಕೌಂಟರ್, ಎಂಟನೇ ಮಹಡಿಯಲ್ಲಿ ನಾಲ್ಕು ಕೌಂಟರ್, ಟ್ರಾಮಾ ಕೇರ್ ಸೆಂಟರ್ನಲ್ಲಿ ನಾಲ್ಕು ಕೌಂಟರ್ಗಳನ್ನು ತೆರೆಯಲಾಗಿದೆ. ಸಾಮಾನ್ಯ ಕೌಂಟರ್ಗಳಲ್ಲಿ ಒಂದು ಗಂಟೆಗೆ ಸರಾಸರಿ 70 ಹೊರ ಒಪಿಡಿ ಚೀಟಿಗಳನ್ನು ನೀಡಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-34-1644911485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.