ಕಲಬುರಗಿ: ‘ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರು ಹಣಕಾಸು ಅವ್ಯವಹಾರ ನಡೆಸಿದ ಸಂಶಯವಿದ್ದು, ಅವರ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು’ ಎಂದು ಪ್ರಿಯದರ್ಶಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಸುಮಾ ಎಸ್.ಕವಲ್ದಾರ್ ಒತ್ತಾಯಿಸಿದರು.

‘2022ರಿಂದ 2026ರ ಜನವರಿ ತನಕ ಬಾಪುಗೌಡ ದರ್ಶನಾಪುರ ರಂಗಮಂದಿರ ಹಾಗೂ ಸುವರ್ಣ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮಗಳ ಖರ್ಚಿನ ವಿವರ ಹಾಗೂ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಸಮ್ಮೇಳನಗಳಿಗೆ ಕಸಾಪ ಕೇಂದ್ರ ಕಚೇರಿಯಿಂದ ಬಂದ ಹಣದ ಮಾಹಿತಿ ಆರ್ಟಿಐ ಮೂಲಕ ಫೆಬ್ರುವರಿ 9ರಂದು ಕೇಳಲಾಗಿತ್ತು. ಆದರೆ, ಈ ತನಕ ಅವರು ಮಾಹಿತಿ ನೀಡಿಲ್ಲ. ಈ ಸಂಬಂಧ ಕಸಾಪ ಕೇಂದ್ರ ಕಚೇರಿ ಆಡಳಿತಾಧಿಕಾರಿ ಅವರಿಗೂ ಪತ್ರ ಬರೆಯಲಾಗಿದ್ದು, ಅಲ್ಲಿಂದಲೂ ಉತ್ತರ ಸಿಕ್ಕಿಲ್ಲ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘ಕಸಾಪ ಜಿಲ್ಲಾಧ್ಯಕ್ಷರು ತಮ್ಮ ಹಿಂಬಾಲಕರಿಗೆ ಮಾತ್ರ ಸಾಹಿತ್ಯ ಸಮ್ಮೇಳನಗಳಲ್ಲಿ ಅವಕಾಶ ನೀಡುತ್ತಿದ್ದಾರೆ. ಜೊತೆಗೆ ಜಿಲ್ಲಾ ಸಮ್ಮೇಳನಗಳ ಅಧ್ಯಕ್ಷರಿಂದ ಹಣ ಪಡೆದ ಆರೋಪಗಳೂ ಕೇಳಿಬರುತ್ತಿವೆ. ಅವರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ. ಜೊತೆಗೆ ಈ ಅವ್ಯವಹಾರ ತನಿಖೆಗೆ ಲೋಕಾಯುಕ್ತರಿಗೂ ದೂರು ನೀಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಅಫಜಲಪುರ ಪದಾಧಿಕಾರಿ ಚಂದ್ರಕಾಂತ ಜಮಶೆಟ್ಟಿ, ಜಯಶ್ರೀ ಆರ್.ಪತ್ತಾರ, ಚನ್ನವೀರ ದಸ್ತಾಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-1826674541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.