ಕಲಬುರಗಿ: ಪ್ರಮುಖ ಇಲಾಖೆಗಳ ಹೊಣೆ ಹೊತ್ತರೂ ಕೆಲ ಸಚಿವರು ತಮ್ಮ ಜಿಲ್ಲೆಗೇ ಸೀಮಿತರಾಗಿದ್ದಾರೆ. ಅಂತಹ ಸಚಿವರನ್ನು ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೈಬಿಟ್ಟು ಎಲ್ಲ ಕಡೆ ಸಂಚರಿಸುವ, ಆಸಕ್ತಿಯಿಂದ ಕೆಲಸ ಮಾಡುವ ಶಾಸಕರಿಗೆ ಅವಕಾಶ ನೀಡಬೇಕು ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್. ಪಾಟೀಲ ತಿಳಿಸಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ತಮಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಲು ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ‘ಕೆಲ ಶಾಸಕರು ನನಗೂ ದೆಹಲಿಗೆ ಬರುವಂತೆ ಕರೆದಿದ್ದರು. ಬಸವ ಜಯಂತ್ಯುತ್ಸವದ ಕೆಲಸಗಳು ಇರುವುದರಿಂದ ಹೋಗುವುದು ಆಗಿಲ್ಲ. ಬಹುತೇಕ ಸಚಿವರು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಒಮ್ಮೆಯೂ ಭೇಟಿ ಕೊಟ್ಟಿಲ್ಲ. ಸಭೆಯನ್ನೂ ನಡೆಸಿಲ್ಲ. ಕೆಲವರು ತಮ್ಮ ಕ್ಷೇತ್ರಕ್ಕೇ ಸೀಮಿತರಾಗಿದ್ದರು. ಹೀಗಾಗಿ, ಅಂಥವರನ್ನು ಕೈ ಬಿಡುವುದು ಸೂಕ್ತ. ಹೈಕಮಾಂಡ್ ಈ ವಿಚಾರದಲ್ಲಿ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-34-800891540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.