ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ ಮಾರ್ಗವಾಗಿ ಮುಂಬೈ–ಬೆಂಗಳೂರು ಮಧ್ಯೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ನೀಡಿರುವ ಕುರಿತು ಸಚಿವ ಪ್ರಲ್ಹಾದ ಜೋಶಿ ಅವರ ಹೇಳಿಕೆಯನ್ನು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಸ್ವಾಗತಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ‘ಕಲಬುರಗಿ–ಬೆಂಗಳೂರು ನಡುವೆ ಉತ್ತಮ ಹಾಗೂ ವೇಗವಾದ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಈ ಭಾಗದ ಜನತೆ ಹಾಗೂ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯಾಗಿದ್ದು, ಈ ಕುರಿತು ನಿರಂತರವಾಗಿ ಕೇಂದ್ರ ರೈಲ್ವೆ ಸಚಿವಾಲಯದ ಗಮನ ಸೆಳೆಯುತ್ತ ಬಂದಿದ್ದೇವೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆಹಾರ ಮತ್ತು ನಾಗರಿಕ ಪೂರೈಕೆ, ನವೀಕರಿಸಬಹುದಾದ ಇಂಧನ ಮೂಲಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿದ ಸಚಿವರು ಈ ರೈಲನ್ನು ಮಧ್ಯ ಕರ್ನಾಟಕದ ಬದಲು ಕಲ್ಯಾಣ ಕರ್ನಾಟಕ ಮಾರ್ಗವಾಗಿ ಓಡಿಸಲು ಮುಂದಾಗಿದ್ದಾರೆ. ಈ ಕುರಿತು ಸಚಿವ ಜೋಶಿ ಅವರೇ ಕರೆ ಮಾಡಿ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ.

ಈ ರೈಲಿನಿಂದಾಗಿ ಮುಂಬೈ–ಕಲಬುರಗಿ –ಬೆಂಗಳೂರು ಸಂಪರ್ಕ ಹೆಚ್ಚು ಬಲವಾಗುತ್ತದೆ. ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮಗಳಿಗೆ ಉತ್ತೇ ಜನ ಸಿಗುತ್ತದೆ. ಪ್ರಯಾಣಿಕರಿಗೆ ಸುಗಮ ಹಾಗೂ ವೇಗವಾದ ಸಂಚಾರ ಸಾಧ್ಯವಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯುತ್ತದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-597450519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.