ಕಲಬುರಗಿ: ‘ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ನನ್ನ ವೈಯಕ್ತಿಕ ರಾಜಕೀಯ ಬದುಕಿನಲ್ಲಿ, ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರವಹಿಸಿದೆ’ ಎಂದು ಅವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಪ್ರಿಯಾಂಕ್ ಖರ್ಗೆ ಸ್ಮರಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಪ್ರಯುಕ್ತ ‘ಎಕ್ಸ್’ನಲ್ಲಿ ಅವರ ಕುರಿತು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಪ್ರಿಯಾಂಕ್, ‘ಐಟಿ, ಬಿಟಿ ಮತ್ತು ಪ್ರವಾಸೋದ್ಯಮದಂತಹ ಮಹತ್ವದ ಖಾತೆಗಳ ಜವಾಬ್ದಾರಿ ವೇಳೆ, ಸಂಪುಟದಲ್ಲಿನ ಅತಿ ಕಿರಿಯ ಸಚಿವ ಎಂಬ ಹಿಂಜರಿಕೆ ಉಂಟಾಗದಂತೆ ನನ್ನಲ್ಲಿ ಆತ್ಮವಿಶ್ವಾಸ ತುಂಬುವ ಜೊತೆಗೆ, ಜನಪರ ಯೋಜನೆಗಳನ್ನು ರೂಪಿಸಲು ಸ್ವಾತಂತ್ರ್ಯ ನೀಡಿದರು. ಪ್ರಸಕ್ತ ಅವಧಿಯಲ್ಲಿಯೂ ಎರಡು ಪ್ರಮುಖ ಖಾತೆಗಳ ಜವಾಬ್ದಾರಿಯುತ ಹೊಣೆಗಾರಿಕೆಯಲ್ಲಿ ಅವರ ಮಾರ್ಗದರ್ಶನ ಮೌಲ್ಯಯುತವಾಗಿತ್ತು’ ಎಂದಿದ್ದಾರೆ.

‘ಕರ್ನಾಟಕದ ಮುಖ್ಯಮಂತ್ರಿಯಾಗಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿದ ದಾಖಲೆಯೊಂದಿಗೆ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು, ಸೈದ್ಧಾಂತಿಕ ನಿಲುವುಗಳು, ರಾಜಕೀಯ ಹೋರಾಟಗಳಿಂದ ರಾಜ್ಯದ ಜನತೆಯ ಪ್ರೀತಿಗೆ ಪಾತ್ರರಾದವರು ಸಿದ್ದರಾಮಯ್ಯ ಅವರು. ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಸಂವಿಧಾನದ ಮೌಲ್ಯಗಳು, ಜಾತ್ಯತೀತ ಹಾಗೂ ಸಮಾಜವಾದಿ ತತ್ವಗಳಿಗೆ ಬದ್ಧರಾಗಿ, ಪ್ರಬುದ್ಧ ರಾಜಕಾರಣಕ್ಕೆ ಮೇಲ್ಪಂಕ್ತಿ ಹಾಕಿದರು. ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸ್ಫೂರ್ತಿಯಾಗಿದ್ದಾರೆ’ ಎಂದಿದ್ದಾರೆ.

‘ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಮುಕ್ತ ಆಡಳಿತ, ಅಭಿವೃದ್ಧಿಪರ ಕೆಲಸಗಳನ್ನು ಮಾಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ತುಂಬಿವೆ. ಇಂತಹ ಮುತ್ಸದ್ಧಿ ನಾಯಕರ ಸಂಪುಟದಲ್ಲಿ ಸಚಿವ ಸ್ಥಾನ ನಿಭಾಯಿಸಿರುವುದು ನನಗೆ ಹೆಮ್ಮೆಯ ಸಂಗತಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿರುವುದು ನಮ್ಮೆಲ್ಲರಿಗೂ ಭಾವುಕ ಸಂಗತಿ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ, ಕೋಮುವಾದಿ ಶಕ್ತಿಗಳಿಂದ ರಾಜ್ಯವನ್ನು ರಕ್ಷಿಸೋಣ’ ಎಂದು ಬರೆದುಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-2004647795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.