ಕಲಬುರಗಿ: ರಾಜ್ಯ ಸರ್ಕಾರ ಮಾರ್ಚ್ 27ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿಯ ಸಂಪೂರ್ಣ ಜಾರಿಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಶೋಷಿತ ಜನಜಾಗೃತ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಜವಳಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ವಿಧೇಯಕವು ರಾಜ್ಯಪಾಲರ ಸಹಿ ಪಡೆದು ಅನುಮೋದನೆಗೊಂಡಿದೆ ಎಂದು ಸಂತಸಪಡುವ ಸಂದರ್ಭದಲ್ಲಿ ಒಳಮೀಸಲಾತಿ ಅನ್ವಯವಾಗದಂತೆ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಫೆ.26ರ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿರುವುದು ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಬಗೆದ ಘೋರ ಅನ್ಯಾಯವಾಗಿದೆ’ ಎಂದು ಕಿಡಿಕಾರಿದರು.

‘ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕಾದ ಸಮಾಜ ಕಲ್ಯಾಣ ಸಚಿವರೇ ಒಳಮೀಸಲಾತಿ ಜಾರಿಗೆ ಅಡ್ಡಲಾಗಿದ್ದಾರೆ. ಎಲ್ಲ ಪರಿಶಿಷ್ಟರಿಗೆ ನ್ಯಾಯ ಒದಗಿಸುವ ಬದಲು ಪಕ್ಷಪಾತಿಯಾಗಿ ನಡೆದುಕೊಳ್ಳುತ್ತ ಬಂದಿದ್ದಾರೆ’ ಎಂದರು.

ರಾಮಚಂದ್ರ ಆರ್. ಕಾಂಬಳೆ, ಸುಂದರ ಸಾಗರ, ಲಕ್ಕಪ್ಪ ಜವಳಿ, ಶಿವಕುಮಾರ ಆಜಾದಪುರ ಮತ್ತು ರಾಹುಲ್ ಮೇತ್ರೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-34-1129918976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.