ಕಲಬುರಗಿ: ‘ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲ ಹಾಗೂ ಪ್ರಾಮಾಣಿಕ ಸಚಿವ ಎಂದೇ ಖ್ಯಾತಿ ಪಡೆದಿರುವ ಜಿಲ್ಲೆಯ ಸೇಡಂ ಕ್ಷೇತ್ರದ ಶಾಸಕ ಡಾ.ಶರಣಪ್ರಕಾಶ ಪಾಟೀಲ ಅವರನ್ನು ಡಿಸಿಎಂ ಮಾಡುವುದರ ಜತೆಗೆ ಪ್ರಮುಖ ಖಾತೆ ನೀಡಬೇಕು’ ಎಂದು ಜಿಲ್ಲಾ ಆದಿ ಬಣಜಿಗ ಸಮಾಜ ಆಗ್ರಹಿಸಿದೆ.

ಈ ಕುರಿತು ಕಲಬುರಗಿಯಲ್ಲಿ ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಮಾಜದ ಮುಖಂಡರು, ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತ್ಯಧಿಕ ಮತಗಳಿಂದ ಗೆದ್ದಿರುವುದು ಪಾಟೀಲ ಅವರ ಜನಪ್ರಿಯತೆ ಹಾಗೂ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಪಕ್ಷ ಗೆಲ್ಲಲು ಅವರ ಪರಿಶ್ರಮ ಬಹಳಷ್ಟಿದೆ’ ಎಂದು ತಿಳಿಸಿದರು.

‘ಡಾ.ಶರಣಪ್ರಕಾಶ ಅವರು ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರದ ಬಲವರ್ಧನೆ ಅದರಲ್ಲೂ ಕಲಬುರಗಿ ಮೆಡಿಕಲ್ ಹಬ್ ಮಾಡಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳನ್ನು ಶರಣಪ್ರಕಾಶ ಪಾಟೀಲ ಅವರನ್ನು ನೋಡಿ ಕಲಿಯಬೇಕು ಎಂದಿದ್ದರು. ಅವರನ್ನು ಡಿಸಿಎಂ ಮಾಡಿದರೆ ಅಭಿವೃದ್ಧಿಗೆ ಪೂರಕವಾಗುತ್ತದೆ’ ಎಂದರು.

ಸಮಾಜದ ಗೌರವಾಧ್ಯಕ್ಷ ಬಸವರಾಜ ಕೊನೇಕ್, ಅಧ್ಯಕ್ಷ ಶಿವಪುತ್ರಪ್ಪ ಬರುಡೆ, ಕಾರ್ಯದರ್ಶಿ ರಾಜೇಂದ್ರ ಕರೆಕಲ್ ಸೇರಿದಂತೆ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-317869866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.