ಕಲಬುರಗಿ: ಮುಂಬೈ–ಬೆಂಗಳೂರು ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ, ಹುಬ್ಬಳ್ಳಿ ಬದಲು ಕಲಬುರಗಿ, ರಾಯಚೂರು ಮಾರ್ಗವಾಗಿ ಓಡಿಸಬೇಕು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಶರಣಬಸವಪ್ಪ ಅಪ್ಪ ಫ್ಯಾಮಿಲಿ ಟ್ರಸ್ಟ್ನ ಟ್ರಸ್ಟಿ ದಾಕ್ಷಾಯಣಿ ಎಸ್. ಅಪ್ಪ, ಮಾಜಿ ಸಂಸದ ಡಾ.ಉಮೇಶ ಜಾಧವ ಹಾಗೂ ಇತರರು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಒತ್ತಾಯಿಸಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಅಮರನಾಥ ಪಾಟೀಲ ಅವರು ದೆಹಲಿಯಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಸಚಿವರು, ಶಾಸಕರು, ಜನಪ್ರತಿನಿಧಿಗಳ ಪತ್ರಗಳನ್ನು ತಲುಪಿಸಿದರು.

ಬೆಂಗಳೂರಿನಿಂದ ಕಲಬುರಗಿ ಮಾರ್ಗವಾಗಿ ಮುಂಬೈಗೆ ಮಧ್ಯ ಕರ್ನಾಟಕದ ರೂಟ್ಗಿಂತ ಕಡಿಮೆ ಸಮಯದಲ್ಲಿ ತಲುಪಬಹುದು. ಹುಬ್ಬಳ್ಳಿ–ಬೆಳಗಾವಿ ಮೂಲಕ ಮುಂಬೈಗೆ ಸಂಚರಿಸಲು 23 ಗಂಟೆ ಬೇಕು. ಆದರೆ, ಕಲಬುರಗಿ ಮಾರ್ಗವಾಗಿ ಮುಂಬೈ ತಲುಪು ಕೇವಲ 15 ಗಂಟೆಗಳು ಸಾಕು. ಇಡೀ ರೈಲು ಮಾರ್ಗ ವಿದ್ಯುದೀಕರಣಗೊಂಡಿದ್ದು, ಗಂಟೆಗೆ 130 ಕಿ.ಮೀ. ವೇಗದಲ್ಲಿ ಸಂಚರಿಸಬಹುದು. 160 ಕಿ.ಮೀ. ವರೆಗೆ ಮೇಲ್ದರ್ಜೆಗೆ ಏರಿಸಲು ಅವಕಾಶವಿದೆ. ಈ ಮಾರ್ಗದಿಂದಾಗಿ ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ತೀರ್ಥಕ್ಷೇತ್ರಗಳಾದ ಸತ್ಯಸಾಯಿ ಪ್ರಶಾಂತಿ ನಿಲಯಂ (ಪುಟ್ಟಪರ್ತಿ), ಮಂತ್ರಾಲಯ, ಗಾಣಗಾಪುರ, ತುಳಜಾಪುರ, ಅಕ್ಕಲಕೋಟ, ಸೋಲಾಪುರಕ್ಕೆ ಈ ರೈಲು ಅತ್ಯಂತ ಪ್ರಶಸ್ತವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮಾಜಿ ಸಂಸದ ಡಾ.ಉಮೇಶ ಜಾಧವ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.