ಕಲಬುರಗಿ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ (ಎಐಎಂಎಸ್ಎಸ್) ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

‘ದೇಶದಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳನ್ನು ಕೊನೆಗೊಳಿಸಲು, ಅವರ ಹಕ್ಕುಗಳ ರಕ್ಷಣೆಗಾಗಿ ಎಐಎಂಎಸ್ಎಸ್ ಶ್ರಮಿಸುತ್ತಿದೆ. ಜ್ವಲಂತ ಸಮಸ್ಯೆಗಳಾದ ಬಾಲ್ಯ ವಿವಾಹ, ಸ್ತ್ರೀ ಭ್ರೂಣ ಹತ್ಯೆ, ವರದಕ್ಷಿಣೆ ಕೊಲೆ, ಲಿಂಗ ತಾರತಮ್ಯ, ಮರ್ಯಾದೆಗೇಡು ಹತ್ಯೆ, ಅಪೌಷ್ಟಿಕತೆ, ಅಭದ್ರತೆ, ಕೌಟುಂಬಿಕ ದೌರ್ಜನ್ಯದಂತಹ ಹಲವಾರು ಸಮಸ್ಯೆಗಳ ವಿರುದ್ಧ ಮಹಿಳೆಯರನ್ನು ಸಂಘಟಿಸುತ್ತಿದೆ. ಕರ್ನಾಟಕದಲ್ಲೂ ಈ ಎಲ್ಲಾ ಸಮಸ್ಯೆಗಳ ವಿರುದ್ಧ 2025ರ ನವೆಂಬರ್ 25ರಿಂದ 2026ರ ಮಾರ್ಚ್ 25ರವರೆಗೆ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಹಿ ಸಂಗ್ರಹ ಅಭಿಯಾನವನ್ನು ಕೈಗೆತ್ತಿಕೊಂಡಿತ್ತು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ‘ಇವ ನಮ್ಮವ’ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದ್ದು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಿದ್ದು ಸ್ವಾಗತಾರ್ಹವಾಗಿವೆ. ಇದು ಜನಾಭಿಪ್ರಾಯಕ್ಕೆ ಸಂದ ಜಯ. ಈ ಕಾನೂನುಗಳು ಪರಿಣಾಮಕಾರಿಯಾಗಿ ತಳಮಟ್ಟದವರೆಗೂ ಕಾರ್ಯ ನಿರ್ವಹಿಸುವಂತೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.

ಹಕ್ಕೊತ್ತಾಯಗಳು: ಉದ್ಯೋಗದ ಸ್ಥಳಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಆಂತರಿಕ ದೂರು ಸಮಿತಿ ಖಾತ್ರಿ ಪಡಿಸುವುದು, ‘ಇವ ನಮ್ಮವ’ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವುದು, ಸ್ತ್ರೀ ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಪ್ರಾಪ್ತರ ಗರ್ಭಧಾರಣೆ ಹಾಗೂ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಂಘಟನೆಯ ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ, ಕಾರ್ಯಕರ್ತೆಯರಾದ ವಿಶಾಲಾಕ್ಷಿ, ರಾಧಾ, ಭಾರತಿ, ಸಾಬಮ್ಮ, ರಾಧಿಕಾ, ಮಹಾದೇವಿ, ರೂಪಾ, ಉಷಾ, ಸುನೀತಾ, ವಾಣಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-34-552206708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.