ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮಾನತುಗೊಂಡಿದ್ದ ಕಲ್ಲೇಶ್‌ಗೆ ಆಡಳಿತಾಧಿಕಾರಿ ಹುದ್ದೆ

Published : 11 ಸೆಪ್ಟೆಂಬರ್ 2024, 16:18 IST
Last Updated : 11 ಸೆಪ್ಟೆಂಬರ್ 2024, 16:18 IST
ಫಾಲೋ ಮಾಡಿ
Comments

ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ್ದ ₹83 ಕೋಟಿ ಅನುದಾನಕ್ಕೆ ಬಳಕೆ ಪ್ರಮಾಣಪತ್ರ ಸಲ್ಲಿಸಿಲ್ಲ ಎನ್ನುವ ಆರೋಪದ ಮೇಲೆ ಅಮಾನತುಗೊಂಡಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಕಲ್ಲೇಶ್‌ ಬಿ. ಅವರಿಗೆ ಕೊಪ್ಪಳದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ನಿರ್ದೇಶಕ ಕಲ್ಲೇಶ್‌ ಅವರು ವಸತಿನಿಲಯಗಳ ಪರಿವೀಕ್ಷಣೆ ಮಾಡದಿರುವುದು, ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ನಿಲಯಗಳಿಂದ ಬೇಡಿಕೆ ಪಡೆಯದೇ ಸಾಮಗ್ರಿಗಳನ್ನು ಕೇಂದ್ರೀಕೃತ ಟೆಂಡರ್‌ ಮೂಲಕ ಖರೀದಿಸಿ ಸರಬರಾಜು ಮಾಡಿರುವುದು, ಸಾರ್ವಜನಿಕ ಹಣ ಸಮರ್ಪಕವಾಗಿ ನಿಯೋಜಿತ ಕಾರ್ಯಕ್ರಮಗಳಿಗೆ ಬಳಕೆ ಆಗದಿರುವುದು ಮತ್ತು ವಸತಿ, ಆಶ್ರಯ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 75ಕ್ಕಿಂತ ಕಡಿಮೆ ಇದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಬೇತಿ ಮೂಲಕ ಗುಣಾತ್ಮಕ ಶಿಕ್ಷಣ ನೀಡಲು ಕ್ರಮ ವಹಿಸದ ಕಾರಣಗಳನ್ನು ನೀಡಿ ಅವರನ್ನು ಅಮಾನತು ಮಾಡಲಾಗಿತ್ತು. 

ಅಮಾನತು ಆದೇಶವನ್ನು ತೆರವುಗೊಳಿಸಿ, ಕೊಪ್ಪಳ ವೈದ್ಯಕೀಯ ಕಾಲೇಜಿಗೆ ನಿಯೋಜನೆ ಮಾಡುವಂತೆ ಸೆ. 9ರಂದು ಕಲ್ಲೇಶ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. 

ವಾಲ್ಮೀಕಿ ಅಭಿವೃದ್ಧಿ ನಿಗಮದ ಪದನಿಮಿತ್ತ ನಿರ್ದೇಶಕರೂ ಆಗಿದ್ದ ಅವರು ನಿಗಮದ ಹಗರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾಕ್ಷ್ಯ ಹೇಳಲು ಜಾರಿ ನಿರ್ದೇಶನಾಲಯ ಒತ್ತಡ ಹಾಕುತ್ತಿದೆ ಎಂದು ಆರೋಪಿಸಿ, ಇ.ಡಿ. ಅಧಿಕಾರಿಗಳ ವಿರುದ್ಧವೇ ನಗರದ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅವರ ದೂರು ಆಧರಿಸಿ ಎಫ್‌ಐಆರ್‌ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT