ಬೆಂಗಳೂರು: ಕೋವಿಡ್–19 ಸೋಂಕಿನಿಂದ ಬಳಲುತ್ತಿರುವ ಕಲ್ಮನೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಸರ್ಕಾರ ಕೂಡಲೇ ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಮೇಗೌಡರ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡ ಪ್ರಶಂಸಿಸಿದ್ದಾರೆ. ಅವರನ್ನು ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು’ ಎಂದು ಮನವಿ ಮಾಡಿದ್ದಾರೆ.

85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇನ್ನಷ್ಟು...

ಕಲ್ಮನೆ ಕಾಮೇಗೌಡರಿಗೆ ಕೋವಿಡ್-19 ದೃಢ

ಕಾಮೇಗೌಡರ ಜಲಕ್ರಾಂತಿ ಶ್ಲಾಘಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.