ಬೆಂಗಳೂರು: ನಂಜುಂಡಪ್ಪ ವರದಿಯ ಅನ್ವಯ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಲ್ಲಿ ಶಿಕ್ಷಣಕ್ಕೆ ಶೇ 25ರಷ್ಟು ಮೊತ್ತ ಮೀಸಲಿಡುವುದಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ರಾಜಭವನದಲ್ಲಿ ಮಂಗಳವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದ ಕಲ್ಯಾಣ ಕರ್ನಾಟಕದ ನಿಯೋಗದ ಸದಸ್ಯರಾದ ಎನ್.ಎಸ್. ಬೋಸರಾಜು, ಶರಣ ಪ್ರಕಾಶ ಪಾಟೀಲ, ಈಶ್ವರ ಖಂಡ್ರೆ, ಡಿ.ಸುಧಾಕರ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್ ಅವರು ಮಂಡಳಿ ಹಮ್ಮಿಕೊಳ್ಳುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣಕ್ಕೆ ಒತ್ತು ನೀಡಬೇಕು. ಅಲ್ಲಿನ ವಿಶ್ವವಿದ್ಯಾನಿಲಯಗಳನ್ನು ಬಲಪಡಿಸುವ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿಯೋಗಕ್ಕೆ ರಾಜ್ಯಪಾಲರು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.