ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ?
ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು. 3/4#LawAndOrder
ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 4/4#LawAndOrder