ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ‘ಕನಕಶ್ರೀ ಪ್ರಶಸ್ತಿ’ಗೆ ಸಾಹಿತಿ ಮತ್ತು ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಕನಕದಾಸರ ಜಯಂತಿ ಪ್ರಯುಕ್ತ ನೀಡುವ ಈ ಪ್ರಶಸ್ತಿಯು ₹5 ಲಕ್ಷ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಸಾಹಿತಿ ಕೆ.ಮರುಳಸಿದ್ದಪ್ಪ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ.

ವಿಜಯಪುರದ ಚಂದ್ರಕಾಂತ ಬಿಜ್ಜರಗಿ ಅವರು, ‘ದರ್ಪಣ’ ವಾರಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ‘ಹಾಲುಮತ ಸನಾತನ ಧರ್ಮ’, ‘ಕುರುಬರ ಕುಲ ಪುತ್ರ ಚಂದ್ರಗುಪ್ತ ಮೌರ್ಯ’, ‘ದಾರ್ಶನಿಕ ಕವಿ ಕನಕದಾಸ’ ಸೇರಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಅನೇಕ ಸಂಶೋಧನಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಶನಿವಾರ ಆಯೋಜಿಸಿರುವ ಕನಕದಾಸರ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.