ಬೆಂಗಳೂರು: ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೊ ಬಹಿರಂಗಪಡಿಸಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಗೆಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ದೂರು ನೀಡಿದೆ.

‘ರಾಸಲೀಲೆ ವಿಡಿಯೊ ಬಹಿರಂಗದ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಕುಗ್ಗಿಸುವ ಹಾಗೂ ತೇಜೋವಧೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ವಿಡಿಯೊಗೆ ಹಾಗೂದಿನೇಶ್ ಅವರಿಗೆ ಯಾವುದೇ ಸಂಬಂಧವಿಲ್ಲ. ಯುವತಿಗೆ ನಿಜವಾಗಿ ಅನ್ಯಾಯವಾಗಿದ್ದರೆ ಏಕೆ ದೂರು ನೀಡಿಲ್ಲ?’ ಎಂದು ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ದೂರಿನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ನೋಡಿ.. VIDEO: ಇನ್ನಷ್ಟು ನಾಯಕರ ಅಕ್ರಮಗಳು ಶೀಘ್ರ ಬಹಿರಂಗ: ದಿನೇಶ್ ಕಲ್ಲಹಳ್ಳಿ ಬಾಂಬ್

‘ವಿಡಿಯೊದಲ್ಲಿ ಸಮ್ಮತಿಯುತ ಲೈಂಗಿಕ ಕ್ರಿಯೆ ವ್ಯಕ್ತವಾಗಿದೆ. ವೈಯಕ್ತಿಕ ವಿಚಾರವನ್ನು ಅಪಪ್ರಚಾರ ಮಾಡಲಾಗುತ್ತಿದ್ದು, ಇದರ ಹಿಂದೆ ಪ್ರಭಾವಿಗಳು ಇರಬಹುದು. ಇದೊಂದು ಬ್ಲ್ಯಾಕ್ಮೇಲ್ ರಾಜಕಾರಣ. ವಿಡಿಯೊ ಕುರಿತು ಸಮಗ್ರ ತನಿಖೆಯಾಗಬೇಕು. ದಿನೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ..ಲೈಂಗಿಕ ದುರ್ಬಳಕೆ, ವಂಚನೆ ಆರೋಪ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ

ನಾಳೆ ಠಾಣೆಗೆ ಬರುವಂತೆ ನೋಟಿಸ್: ರಾಸಲೀಲೆ ವಿಡಿಯೊ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಠಾಣೆಗೆ ಗುರುವಾರ (ಮಾ.4) ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ದಿನೇಶ್ ಕಲ್ಲಹಳ್ಳಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ರಾಸಲೀಲೆ ವಿಡಿಯೊ ಸಂಬಂಧ ದಿನೇಶ್ ಅವರು ಇದೇ ಠಾಣೆಗೆ ದೂರು ನೀಡಿದ್ದರು. ಹೆಚ್ಚಿನ ವಿಚಾರಣೆ ನಡೆಸಲು ಸಲುವಾಗಿ ನೋಟಿಸ್ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.