ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಶಿಕ್ಷಣ: ಸಚಿವ ಜಮೀರ್ ಅಹಮದ್‌ ಖಾನ್

Published 28 ಆಗಸ್ಟ್ 2023, 19:58 IST
Last Updated 28 ಆಗಸ್ಟ್ 2023, 19:58 IST
ಅಕ್ಷರ ಗಾತ್ರ

ಬೆಂಗಳೂರು: ಮದರಸಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸುವಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಮದರಸಗಳಲ್ಲಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ, ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ರಾಜ್ಯದಲ್ಲಿ 1,265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಗಳಿದ್ದು, ಈ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಕಲಿಕೆ ಆರಂಭಿಸಬೇಕು. ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಬೇಕು’ ಎಂದೂ ಸೂಚಿಸಿದರು.

ಇದೇ ವೇಳೆ ಸಚಿವರು, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದರಿ ಶಾಲೆಗಳ 9, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ಧಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಬಿಡುಗಡೆ ಮಾಡಿದರು.

ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕ್ಯಾನ್‌ ಮಾಡಿಯೂ ಮಾಹಿತಿ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT