ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಫೆ. 8ರಿಂದ 12ರವರೆಗೆ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳ ನಗರದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ನಡೆಯಲಿದೆ.

ಫೆ. 8ರಂದು ಬೆಳಿಗ್ಗೆ 11ಕ್ಕೆ ಸಾಹಿತಿ ಚಂದ್ರಶೇಖರ ಕಂಬಾರ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಪ್ರತಿ ದಿನ ಬೆಳಿಗ್ಗೆ 10ರಿಂದ ರಾತ್ರಿ 8.30ರವರೆಗೆ ಪ್ರದರ್ಶನ ನಡೆಯಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಹೇಳಿದರು.

ಈ ಅವಧಿಯಲ್ಲಿ ಪ್ರತಿದಿನ ಸಂಜೆ 5ರಿಂದ 6ರವರೆಗೆ ಸಾಹಿತಿಗಳೊಂದಿಗೆ ಸೆಲ್ಫಿ ಕಾರ್ಯಕ್ರಮ ನಡೆಯಲಿದೆ. 15 ಖ್ಯಾತನಾಮ ಸಾಹಿತಿಗಳು ಸೆಲ್ಫಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೇಳದ ವಿಶೇಷ: ಒಟ್ಟು 60 ಮಳಿಗೆಗಳಿಗೆ ಅವಕಾಶವಿದೆ. ಈಗಾಗಲೇ ಸುಮಾರು 80ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. 58 ಮಂದಿ ಪ್ರಕಾಶಕರು ಭಾಗವಹಿಸಲಿದ್ದಾರೆ. ಎಲ್ಲ ಪುಸ್ತಕಗಳ ಮೇಲೆ ಕನಿಷ್ಠ ಶೇ 10ರಷ್ಟು ರಿಯಾಯಿತಿ ಇದೆ. ಪ್ರಚಾರದ ವಿಡಿಯೊವನ್ನು ವಾಟ್ಸ್‌ಆ್ಯಪ್, ಫೇಸ್‌ಬುಕ್ ಮೂಲಕ ಹಂಚಿದವರಿಗೆ ಪುಸ್ತಕಗಳ ಮೇಲೆ ಶೇ 5ರಷ್ಟು ರಿಯಾಯಿತಿ ಇದೆ. ಪುಸ್ತಕ ಮಾರಾಟಗಾರರಿಗೆ ಮಳಿಗೆಯನ್ನು ಉಚಿತವಾಗಿಯೇ ನೀಡಲಾಗುತ್ತದೆ. ಅವರಿಗೆ ಉಚಿತ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.

ಸಮಗ್ರ ಸಂಪುಟ ಬಿಡುಗಡೆ: ಕವಿ ಎಸ್.ವಿ. ಪರಮೇಶ್ವರ ಭಟ್ಟ ಅವರ ಸಮಗ್ರ ಸಂಪುಟಗಳನ್ನು ಫೆ. 10ರಂದು ಸಂಜೆ 4ಕ್ಕೆ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜು ಸಭಾಂಗಣದಲ್ಲಿ ಬಿಡುಗಡೆ ಮಾಡಲಾಗುವುದು. ಎಂದರು.

ಮಕ್ಕಳಿಗಾಗಿ ಕಮ್ಮಟ: ಮಕ್ಕಳಿಗಾಗಿ ಬರಹಗಾರಿಕೆ ಕಮ್ಮಟವನ್ನು ಫೆ. 14ರಂದು ಬೆಳಿಗ್ಗೆ 10ಕ್ಕೆ ಮಲ್ಲತ್ತಹಳ್ಳಿಯ ಕಲಾ ಗ್ರಾಮದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತ ನಾಗೇಶ ಹೆಗಡೆ, ಸಾಹಿತಿ ವಸುಧೇಂದ್ರ ಭಾಗವಹಿಸಲಿದ್ದಾರೆ ಎಂದರು.

2016ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆ ಅಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಫೆ. 28ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.