ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
.ಸುಧಾಕರ್ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: CM ಸಿದ್ದರಾಮಯ್ಯ ಸಂತಾಪ.
ಕೇರಳಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಆರು ದಿನಗಳು ಕಳೆದರೂ, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಇನ್ನೂ ಅಂತಿಮಗೊಳಿಸಿಲ್ಲ. ಇದು, ಕಾರ್ಯಕರ್ತರು, ಮಿತ್ರಪಕ್ಷಗಳು ಮಾತ್ರವಲ್ಲದೆ, ಸಾರ್ವಜನಿಕರಲ್ಲೂ ಆಕ್ರೋಶಕ್ಕೆ ಕಾರಣವಾಗಿದೆ.
.ಕೇರಳಂ ಸಿಎಂ ಆಯ್ಕೆ ಕಗ್ಗಂಟು: ಕಾಂಗ್ರೆಸ್ ವಿರುದ್ಧ ತೀವ್ರಗೊಳ್ಳುತ್ತಿದೆ ಆಕ್ರೋಶ.
5 ಪಕ್ಷಗಳ ವಿಶ್ವಾಸ ಗಿಟ್ಟಿಸುವ ಮೂಲಕ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರು ಕೊನೆಗೂ ಬಹುಮತ ಪಡೆದು ತಮಿಳುನಾಡಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೀಡಿರುವ ಎಲ್ಲ ಭರವಸೆ ಈಡೇರಿಸುತ್ತೇನೆ. ಕೆಲಸ ಮಾಡಲು ಸ್ವಲ್ಪ ಸಮಯ ಕೊಡಿ ಎಂದ ವಿಜಯ್, ಡಿಎಂಕೆಯು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ.
.ನಂಬಿ ಮತ ಹಾಕಿದ ಜನರಿಗೆ ಹಣವಿಲ್ಲ ಎನ್ನುತ್ತಾ ಮೋಸ ಮಾಡಬೇಡಿ: ವಿಜಯ್ಗೆ ಸ್ಟಾಲಿನ್.
ಅಸ್ಸಾಂನಲ್ಲಿ ಹೊಸ ಸರ್ಕಾರ ರಚಿಸಲು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರಿಗೆ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಭಾನುವಾರ ಆಹ್ವಾನ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ನಾಯಕರು ರಾಜ್ಯಪಾಲ ಆಚಾರ್ಯ ಅವರನ್ನು ಲೋಕ ಭವನದಲ್ಲಿ ಭೇಟಿಯಾಗಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.
.ಅಸ್ಸಾಂನಲ್ಲಿ ಸರ್ಕಾರ ರಚನೆ: ಹಿಮಂತ ಬಿಸ್ವಾ ಶರ್ಮಾಗೆ ರಾಜ್ಯಪಾಲರಿಂದ ಆಹ್ವಾನ.
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಗಳು ಇಂದು ರಾಯ್ಪುರದಲ್ಲಿ ಮುಖಾಮುಖಿಯಾಗಿವೆ.
.IPL 2026: RCB vs MI- ಅಂತಿಮ ಎಸೆತದಲ್ಲಿ ಗೆದ್ದ ಆರ್ಸಿಬಿ!.
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಭಾನುವಾರ (ಮೇ 10) ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಜಯ್ ಅವರು ಸಮಾರಂಭದಲ್ಲಿ ಬಿಳಿ ಷರ್ಟ್, ಕಪ್ಪು ಕೋಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ರಾಜಕೀಯ ಮತ್ತು ಸಾಮಾಜಿಕ ಸಂದೇಶವನ್ನು ರವಾನಿಸುವ ಸಲುವಾಗಿಯೇ ವಿಜಯ್ ಅವರು ಕಪ್ಪು ಬಟ್ಟೆ ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
.ಕಪ್ಪು ಬಟ್ಟೆ ಧರಿಸಿ ಪ್ರಮಾಣವಚನ ಸ್ವೀಕರಿಸಿದ್ದೇಕೆ ವಿಜಯ್? ಇಲ್ಲಿದೆ ಕಾರಣ.
ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಬೆಂಗಳೂರು ನಗರ ಹಾಗೂ ರಾಮನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋರಮಂಗಲದ ಮನೆಯೊಂದರ ಅಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಕಗ್ಗಲೀಪುರದ ತಾತಗುಣಿ ಎಂಬಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದವು.
.ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್ ಪತ್ತೆ.
ದೇಶದಲ್ಲೇ ಮೊದಲ ಬಾರಿಗೆ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾಯ್ದೆ ಜಾರಿ ಮಾಡುವ ಮೂಲಕ ಮಾದರಿಯಾಗಿರುವ ರಾಜ್ಯ ಸರ್ಕಾರವು ಇದೀಗ ಗಿಗ್ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಲು ವಿಶೇಷ ಡಿಜಿಟಲ್ ವೇದಿಕೆಯನ್ನು ಕಲ್ಪಿಸಿದೆ.
.ಗಿಗ್ ಕಾರ್ಮಿಕರ ಕುಂದುಕೊರತೆ ಆಲಿಸಲು ವಿಶೇಷ ಡಿಜಿಟಲ್ ವೇದಿಕೆ ಕಲ್ಪಿಸಿದ ಸರ್ಕಾರ.
ಸಚಿವರಾದ ಡಿ. ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
.ನೀರಾವರಿ ಯೋಜನೆಗೆ ಸುಧಾಕರ್ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಈ ಪೈಕಿ ಇಬ್ಬರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಿದ್ದರೆ, ನಾಲ್ವರಿಗೆ ರಾಜ್ಯ ಸಚಿವರ ಸ್ಮಾನಮಾನ ನೀಡಲಾಗಿದೆ. ಇದಲ್ಲದೇ ಇಬ್ಬರು ರಾಜ್ಯ ಸಚಿವರಿಗೆ ಸ್ವತಂತ್ರ ಖಾತೆ ನೀಡಲಾಗಿದೆ.
.ಉತ್ತರ ಪ್ರದೇಶ ಸಂಪುಟ ವಿಸ್ತರಣೆ: ಯೋಗಿ ಸರ್ಕಾರಕ್ಕೆ ಆರು ಹೊಸ ಸಚಿವರ ಸೇರ್ಪಡೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.