ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ‘ಹಿಂದಿ ಭಾಷೆಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆಯುಳ್ಳ, ಸಾಂಸ್ಕೃತಿಕ ಕ್ರೀಡಾ ಸ್ಫೂರ್ತಿ ಹೊಂದಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಹೊರ ರಾಜ್ಯಗಳಿಗೆ ಕಳುಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಕನ್ನಡ ಬಲ್ಲ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಹಿಂದಿ ಭಾಷೆ ತಿಳಿಯದ, ಕನ್ನಡ ಭಾಷಾ ಜ್ಞಾನ ಹೊಂದಿರುವ ವಿದ್ಯಾರ್ಥಿಗಳಿಗೂ ಅನ್ಯ ರಾಜ್ಯಗಳಿಗೆ ಭೇಟಿ ನೀಡುವ ಅವಕಾಶ ನೀಡಬೇಕು. ಭಾಷೆಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭೇದಭಾವ ಬಿತ್ತುವ ಇಲಾಖೆಯ ನಡೆ ಸರಿಯಾದ ಕ್ರಮವಲ್ಲ’ ಎಂದು ಹೇಳಿದ್ದಾರೆ.