ಬೆಂಗಳೂರು: ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಆಯ್ಕೆ ಸಮಿತಿಯೇ ಸಾಧಕರನ್ನು ಗುರುತಿಸಲಿದೆ’ ಎಂದೂ ಹೇಳಿದರು.

‘ಆಯ್ಕೆ ಎಂಬುದು ಶೋಧನೆಯಿಂದ ಆಗಬೇಕೇ ಹೊರತು ಅರ್ಜಿಯಿಂದಲ್ಲ. ವಯಸ್ಸಿನ ಆಧಾರದಲ್ಲಿ ಪ್ರಶಸ್ತಿ ನೀಡುವುದೂ ಸರಿಯಲ್ಲ ಎಂಬ ಭಾವನೆಯಿದೆ. ಹೀಗಾಗಿ, ಕನಿಷ್ಠ ವಯೋಮಿತಿ ವಿಧಿಸದೆ, ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು’ ಎಂದೂ ತಿಳಿಸಿದರು.

ವಿವಿಧ ಕ್ಷೇತ್ರಗಳ 66 ಸಾಧಕರು ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ 10 ಸಂಘ ಸಂಸ್ಥೆಗಳಿಗೆ ಮುಖ್ಯಮಂತ್ರಿ ಪ್ರಶಸ್ತಿ ಪ್ರದಾನ ಮಾಡಿದರು.

ಕೆಲವು ನಿರ್ದಿಷ್ಟ ಸಂದರ್ಭ ಬಿಟ್ಟು, ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಿರಬೇಕು ಎಂದುಹೈಕೋರ್ಟ್ ಆದೇಶದಂತೆ ಸರ್ಕಾರ ನಿಯಮ ರೂಪಿಸಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡುವ ಕುರಿತು ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.