ಬೆಳಗಾವಿ: ‘ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಲೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರೂ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಮಹಾನಗರ ಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿದರು. ‘ನಾಡದ್ರೋಹಿಗಳ ವಿರುದ್ಧ ಕ್ರಮವಾಗಲಿ’ ಎಂದು ಘೋಷಣೆ ಕೂಗಿದರು.

‘ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ನಾಡವಿರೋಧಿ ಘೋಷಣೆ ಕೂಗಿದರು. ಆದರೆ, ಅದೇ ಕಾರ್ಯಕ್ರಮದಲ್ಲಿದ್ದ ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವ್ಹಾಣ ಸುಮ್ಮನಿದ್ದದ್ದು ಸರಿಯಲ್ಲ. ಅವರೆಲ್ಲರ ಸದಸ್ಯತ್ವ ರದ್ದುಗೊಳಿಸಬೇಕು. ಬೆಳಗಾವಿ ಪಾಲಿಕೆಯನ್ನು ವಿಸರ್ಜಿಸಬೇಕು’ ಎಂದು ಆಗ್ರಹಿಸಿದರು.

‘ಮಹಾರಾಷ್ಟ್ರದಿಂದ ಆಗಾಗ ಬೆಳಗಾವಿಗೆ ಬರುವ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ, ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಲೇ ಇದ್ದಾರೆ. ಅಂಥವರ ವಿರುದ್ಧ ಕ್ರಮವಾಗಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.