ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಉಪಾಧ್ಯಾಯ, ‘ನಮ್ಮ ಬ್ಯಾಂಕ್ ಪರಿಷತ್ತಿನೊಂದಿಗೆ ನಿರಂತರ ಒಡನಾಟದಲ್ಲಿದ್ದು, ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಅಭ್ಯುದಯಕ್ಕೆ ಕೈ ಜೋಡಿಸುತ್ತ ಬಂದಿದೆ. ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಗಮನಿಸಿ, ನವೀಕರಣಕ್ಕೆ ನೆರವು ನೀಡಿದ್ದೇವೆ’ ಎಂದು ಹೇಳಿದ್ದಾರೆ.