ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ನಿಂದಿಸಿ, ನಾಡಗೀತೆ ತಿರುಚಿ ಬರೆದವರ ವಿರುದ್ಧ ಕ್ರಮಕ್ಕೆ ಕಸಾಪ ಆಗ್ರಹ

Last Updated 31 ಮೇ 2022, 5:25 IST
ಅಕ್ಷರ ಗಾತ್ರ

ಬೆಂಗಳೂರು: ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದವರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಸಾಪ ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ಜೋಶಿ, ‘ಕುವೆಂಪು ಅವರ ‘ಜಯಭಾರತ ಜನನಿಯ ತನುಜಾತೆ’ ಕವಿತೆಯನ್ನು ‘ನಾಡಗೀತೆ' ಮಾಡಬೇಕೆಂದು ಮೊದಲು ನಿರ್ಧರಿಸಿದ ಕಸಾಪ, 1971ರಲ್ಲಿ ಕುವೆಂಪು ಅವರ ಸಮ್ಮತಿ ಪಡೆದು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಅದನ್ನು ಹಾಡಿಸುತ್ತಿತ್ತು. 2004ರಲ್ಲಿ ಈ ಸಂಬಂಧ ಕರ್ನಾಟಕ ಸರ್ಕಾರ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.

‘ದಾರ್ಶನಿಕ ಕವಿ ಕುವೆಂ‍ಪು ಅವರನ್ನು ಅರ್ಥೈಸಿಕೊಂಡಿಲ್ಲದಿರುವವರು ಮಾತ್ರ ನಾಡಗೀತೆ ಮತ್ತು ಕುವೆಂಪು ವಿರುದ್ಧ ಟೀಕಿಸುವಂತಹ ಅಡ್ಡದಾರಿ ಹಿಡಿಯುತ್ತಾರೆ. ಇಂತಹ ವ್ಯಕ್ತಿಗಳ ನಡೆಯನ್ನು ಕಸಾಪದ ಎಲ್ಲ ಹಂತಗಳ ಘಟಕಗಳೂ ಒಕ್ಕೊರಲಿನಿಂದ ಖಂಡಿಸುತ್ತವೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT