ಬೆಂಗಳೂರು: 'ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ' ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಗುಡುಗಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಈ ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕಾಗಿ ಬೇಕಾಬಿಟ್ಟಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
.ಕೋಲ್ಕತ್ತ|ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಅಪಘಾತದಲ್ಲಿ ಮತ್ತೆ ಮೂವರಿಗೆ ಗಾಯ!.ಬೆಂಬಲಿಗರ ವಿರುದ್ಧ FIR: ಪಂಜಾಬ್ CM ಮಾನ್ ವಿರುದ್ಧ ಕೇಂದ್ರ ಸಚಿವ ರವನೀತ್ ಕಿಡಿ.
'ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ. ಗ್ಯಾರಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ. ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರಂಟಿ' ಎಂದು ಅಶೋಕ ಕುಟುಕಿದ್ದಾರೆ.
.ನಿದ್ರೆಗೆ ಭಂಗ | ಕೇರಳದಲ್ಲಿ ಹುಂಜದ ವಿರುದ್ಧವೇ ದಾಖಲಾಯ್ತು ಪ್ರಕರಣ!.ಯಾವುದೇ ಹೇಳಿಕೆ, ಸುದ್ದಿ ಪ್ರಕಟಿಸುವಾಗ ಮಾಧ್ಯಮಗಳು ಅತ್ಯಂತ ಎಚ್ಚರ ವಹಿಸಬೇಕು: SC.ಕುಂಭಮೇಳದ ಕುರಿತು ಆರೋಪ ಆಧಾರರಹಿತ: ಯೋಗಿ ಆದಿತ್ಯನಾಥ್.ಚಪ್ಪಲಿ ಹೊಲಿಗೆ ಕಲಿಸಿದ್ದ ರಾಮ್ಚೇತ್ ಕುಟುಂಬವನ್ನು ಮನೆಗೆ ಆಹ್ವಾನಿಸಿದ ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.