ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಕಾಂತರಾಜು ಕಾರ್ಯನಿರ್ವಾಹಕ ನಿರ್ದೇಶಕ

Published 14 ಆಗಸ್ಟ್ 2024, 16:27 IST
Last Updated 14 ಆಗಸ್ಟ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್‌) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಪಿ.ಎಸ್‌.ಕಾಂತರಾಜು ಅವರನ್ನು ವರ್ಗಾವಣೆ ಮಾಡಲಾಗಿದೆ. 

ಈ ಹುದ್ದೆಯಲ್ಲಿದ್ದ ಕೆ.ಎಸ್.ಲತಾ ಕುಮಾರಿ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಇತರರು: ಖುಷ್ಬೂ ಜಿ.ಚೌಧರಿ–ವ್ಯವಸ್ಥಾಪಕ ನಿರ್ದೇಶಕಿ, ಕೆಎಸ್‌ಐಐಡಿಸಿ. ಎಸ್‌.ಬಿ.ಶೆಟ್ಟಣ್ಣನವರ–ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಎಂ.ವಿ.ವೆಂಕಟೇಶ್‌–ಆಯುಕ್ತ, ಧಾರ್ಮಿಕ ದತ್ತಿ ಇಲಾಖೆ. ಬಸವರಾಜೇಂದ್ರ ಎಚ್‌.–ನಿರ್ದೇಶಕ, ತೋಟಗಾರಿಕಾ ಇಲಾಖೆ. ಬಿ.ಸಿ.ಸತೀಶ್‌–ವಿಶೇಷ ಆಯುಕ್ತ, ಬಿಬಿಎಂಪಿ.

ಐಎಫ್‌ಎಸ್‌ ವರ್ಗಾವಣೆ: ಹುಣಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಪಿ.ಎ. ಅವರನ್ನು ನಾಗರಹೊಳೆ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ  ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT