ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪತಗುಡ್ಡ: ‘ಆದೇಶ ವಾಪಸ್‌ ಪಡೆದರೆ ಮತ್ತೆ ಹೋರಾಟ’

ಗದಗ, ಮುಂಡರಗಿಯಲ್ಲಿ ಪ್ರತಿಭಟನೆ; ಜಿಲ್ಲಾಡಳಿತಕ್ಕೆ ಮನವಿ
Last Updated 25 ಸೆಪ್ಟೆಂಬರ್ 2019, 18:49 IST
ಅಕ್ಷರ ಗಾತ್ರ

ಗದಗ: ಅಪರೂಪದ ಜೀವವೈವಿಧ್ಯ ತಾಣ ಕಪ್ಪತಗುಡ್ಡಕ್ಕೆ ನೀಡಿರುವ ‘ವನ್ಯ ಜೀವಿ ಧಾಮ’ ಸ್ಥಾನಮಾನವನ್ನು ವಾಪಸ್‌ ಪಡೆಯಬಾರದು ಎಂದು ಆಗ್ರಹಿಸಿ ಬುಧವಾರ ಗದಗ ಮತ್ತು ಮುಂಡರಗಿಯಲ್ಲಿ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ಮಠಾಧೀಶರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘ವನ್ಯಜೀವಿ ಧಾಮ ಸ್ಥಾನಮಾನ ವಾಪಸ್‌ ಪಡೆದಲ್ಲಿ, ಮತ್ತೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ’ ಎಂದು ಕಪೋತಗಿರಿ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಹೇಳಿ ದರು. ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಮುಂಡರಗಿಯಲ್ಲಿ ತಾಲ್ಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್.ಗೌಡರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಗದುಗಿನ ತೋಂಟದಾರ್ಯ ಮಠ ದಲ್ಲಿ ಬುಧವಾರ ಸಂಜೆ ಕಪ್ಪತಗುಡ್ಡ ಸಂರಕ್ಷಣಾ ಸಮಿತಿ ಸದಸ್ಯರು ಸಭೆ ನಡೆಸಿದರು. ಲಿಂ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಹೋರಾಟದಿಂದ ಕಪ್ಪತಗುಡ್ಡ ವನ್ಯಧಾಮವಾಗಿದೆ. ಈ ಆದೇಶ ವಾಪಸ್‌ ಪಡೆದರೆ ಮತ್ತೆ ಹೋರಾಟ ಅನಿವಾರ್ಯ ಎಂದು ಸಮಿತಿ ಸದಸ್ಯರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT