ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೂತನ ಕ್ರಿಮಿನಲ್ ಕಾನೂನು ತಿದ್ದುಪಡಿ;ಜನರ ದಿಕ್ಕು ತಪ್ಪಿಸುತ್ತಿರುವ ಸರ್ಕಾರ: ಅಶೋಕ

Published 3 ಜುಲೈ 2024, 5:28 IST
Last Updated 3 ಜುಲೈ 2024, 5:28 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಸದನದ ದಿಕ್ಕು ತಪ್ಪಿಸುವ ನಿಮ್ಮ ಯಾವ ಕುತಂತ್ರಗಳು ನಡೆಯುವುದಿಲ್ಲ. ಸದನದಲ್ಲಿ ಉತ್ತರಿಸಲು ತಯಾರಾಗಿ' ಎಂದು ಸವಾಲು ಹಾಕಿದ್ದಾರೆ.

'ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಇವುಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎನ್ನುವ ಭಯದಿಂದ ಹೊಸ ನಾಟಕ ಶುರು ಮಾಡಿರುವ ಈ ನಿರ್ಲಜ್ಜ ಕಾಂಗ್ರೆಸ್ ಸರ್ಕಾರ, ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ' ಎಂದು ಆರೋಪಿಸಿದ್ದಾರೆ.

'ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ಮುಂಬರುವ ಅಧಿವೇಶನದಲ್ಲಿ ನಿಮ್ಮ ಸರ್ಕಾರದ ಎಲ್ಲ ವೈಫಲ್ಯಗಳನ್ನು, ಭ್ರಷ್ಟಾಚಾರಗಳನ್ನು, ಎಡವಟ್ಟುಗಳನ್ನು, ಜನವಿರೋಧಿ ನೀತಿಗಳನ್ನು ಸದನದಲ್ಲಿ ಪ್ರಸ್ತಾಪ ಮಾಡಲಿದ್ದೇವೆ. ನಿಮ್ಮ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನ ಸಾಮಾನ್ಯರ ಪರವಾಗಿ ಸದನದಲ್ಲಿ ದನಿ ಎತ್ತುತ್ತೇವೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT