ಕಾರಟಗಿ: ‘ಹುದ್ದೆಗಳನ್ನು ಭರ್ತಿ ಮಾಡುವ ತರಾತುರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಟಿ ಸೇರಿದಂತೆ ಎಲ್ಲಾ ಹಿಂದುಳಿದ ಜಾತಿಗಳಿಗೂ ಮೋಸ ಮಾಡಿದೆ. ಮುಖ್ಯಮಂತ್ರಿ ಬಹಿರಂಗ ಚರ್ಚೆಗೆ ಬರಲಿ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದ ಶಿವರೆಡ್ಡಿ ನಾಯಕರ ಸುಪುತ್ರನ ವಿವಾಹ ಕಾರ್ಯಕ್ರಮಕ್ಕೆ ಬುಧವಾರ ಭೇಟಿ ನೀಡಿದ್ಗ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಒಳಮೀಸಲಾತಿಯಲ್ಲಿ ರಾಜ್ಯ ಸರ್ಕಾರ ಸಮುದಾಯಗಳನ್ನು ಸಮಾಧಾನ ಮಾಡಲು ಹೋರಾಟಗಾರರ ಮೂಗಿಗೆ ತುಪ್ಪ ಸವರಲಾಗಿದೆ. ಮೀಸಲಾತಿಯಿಂದ ಯಾವ ಸಮುದಾಯಗಳಿಗೂ ನ್ಯಾಯ ದೊರಕಿಲ್ಲ’ ಎಂದು ಹೇಳಿದರು.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು, ಎಲ್ಲ ದೇಶಗಳು ಮೆಚ್ಚಿಕೊಳ್ಳುತ್ತಿರುವುದನ್ನು ಸಹಿಸಲಾಗದೆ ವೈಯಕ್ತಿಕ ತೇಜೋವಧೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ. ಕವನದ ಮೂಲಕ ಮೋದಿ ಅವರಿಗೆ ವ್ಯಂಗ್ಯ ಮಾಡಿರುವ ತಂಗಡಗಿಗೆ ಜನರೇ ಬುದ್ಧಿ ಕಲಿಸುತ್ತಾರೆ. ಕವನದಲ್ಲಿ ಮೋದಿಗೆ ಪತ್ನಿ ಇಲ್ಲ ಎಂದಿದೆ. ಆದರೆ ತಮ್ಮ ಪಕ್ಷದ ರಾಹುಲ್ ಗಾಂಧಿಗೆ ಪತ್ನಿ ಇದ್ದಾರೆಯೇ, ಇಲ್ಲವೋ ಎಂದು ಕವನ ಕಟ್ಟಲಿ ಎಂದು ತಿರುಗೇಟು ನೀಡಿದರು. ಮಾಜಿ ಶಾಸಕ ಬಸವರಾಜ ದಢೇಸೂಗೂರು ಮುಖಂಡರಾದ ಕೆ.ಎನ್. ಪಾಟೀಲ, ನಾಗರಾಜ ಬಿಲ್ಗಾರ, ಸಿ.ಗದ್ದೆಪ್ಪ ನಾಯಕ, ರಾಮಮೋಹನ ಶ್ರೀಧರ, ಪ್ರಭುರಾಜ ಬೂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-1714142730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.