ಬೆಂಗಳೂರು: ಮುಂದಿನ ವರ್ಷದ ಫೆಬ್ರುವರಿಯಲ್ಲಿ ಕಾರ್ಕಳದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ₹77 ಕೋಟಿ ಅನುದಾನ ಬೇಕಾಗಬಹುದು. ಈ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ವಿ. ಸುನಿಲ್ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಯವರ ಪರವಾಗಿ ಪ್ರಿಯಾಂಕ್ ಮಾಹಿತಿ ನೀಡಿದರು.

‘12 ವರ್ಷಗಳಿಗೊಮ್ಮೆ ನಡೆಯುವ ಈ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ನಡೆಸಲಾಗುವುದು. ಎಲ್ಲವನ್ನೂ ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಳ್ಳಲಿದೆ. ಈ ಎಲ್ಲ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು.

ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ‘ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ದೇಶ–ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಮೂಲಸೌಕರ್ಯಗಳು ಸೇರಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಆದ್ದರಿಂದ ಉಪವಿಭಾಗಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು’ ಎಂದು ಅವರು ಸಲಹೆ ನೀಡಿದರು.

ಕೋಳಿ ಸಾಕಣೆ; ದರ ಪರಿಷ್ಕರಣೆಗೆ ಸಮಿತಿ:

‘ಕೋಳಿ ಸಾಕಣಿಕೆದಾರರಿಂದ ಸಗಟು ಖರೀದಿ ಮಾಡುವ ಕಂಪನಿಗಳು ರೈತರಿಗೆ ನೀಡುತ್ತಿರುವ ದರವನ್ನು ಪ್ರತಿ ಕೆಜಿಗೆ ₹20 ನಿಗದಿ ಮಾಡುವುದೂ ಸೇರಿ ಸಹಾಯಧನವನ್ನು ನೀಡುವ ವಿಚಾರವಾಗಿ ಪರಿಶೀಲನೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಕಾಂಗ್ರೆಸ್ನ ಎಂ.ರೂಪಕಲಾ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ‘ಸರ್ಕಾರ ಯುವ ಜನರು ಮತ್ತು ರೈತರ ಪರವಾಗಿದೆ. ಹೀಗಾಗಿ ಕಂಪನಿಗಳ ಜತೆ ಹಲವು ಬಾರಿ ಸಭೆ ನಡೆಸಲಾಗಿದೆ. ಅದಕ್ಕೆ ಕಂಪನಿಗಳು ಒಪ್ಪಿಕೊಂಡಿಲ್ಲ. ಈ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಸಲುವಾಗಿ ವರದಿ ಪಡೆಯಲು ಸಮಿತಿ ರಚಿಸಲಾಗಿದೆ. ವರದಿ ಸಿಕ್ಕಿದ ತಕ್ಷಣ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.