ಕೊಪ್ಪಳ/ವಿಜಯನಗರ/ವಿಜಯಪುರ: ರಾಜ್ಯದಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಐವರು ಮಕ್ಕಳು ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ.

ಕೊಪ್ಪಳ–ವಿಜಯನಗರ ಜಿಲ್ಲೆ ವ್ಯಾಪ್ತಿಯ ತುಂಗಭದ್ರಾ ಅಣೆಕಟ್ಟು ಬಳಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟರೆ, ವಿಜಯಪುರ ಜಿಲ್ಲೆಯಲ್ಲಿ ಮನೆ ಚಾವಣಿ ಕುಸಿದು ನಾಲ್ವರು ಅಸುನೀಗಿದ್ದಾರೆ.

ಕೊಪ್ಪಳ/ವಿಜಯನಗರ ವರದಿ: ತುಂಗಭದ್ರಾ ಅಣೆಕಟ್ಟು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ,ಹುಲಿಗಿಯ ಹುಲಿಗೆಮ್ಮ ದೇವಿಯ ಜಾತ್ರೆಗೆ ತೆರಳುತ್ತಿದ್ದ ಏಳು ಜನ ಭಕ್ತರು ಟ್ಯಾಂಕರ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ವಿಜಯನಗರ, ಬಳ್ಳಾರಿ ಜಿಲ್ಲೆಗಳ ವಿವಿಧ ಊರುಗಳ 19 ಜನ ಸಂಬಂಧಿಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾಗ ಸೇತುವೆ ಬಳಿ ಹಿಂದಿನಿಂದ ಬಂದ ಟ್ಯಾಂಕರ್ ರಭಸದಿಂದ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಅಡಿ ಆಳದ ಸೇತುವೆ ಕೆಳಗಿನ ಗುಂಡಿಗೆ ಉರುಳಿದೆ.

ಸಂಡೂರು ಹಾಗೂ ಕೂಡ್ಲಿಗಿ ತಾಲ್ಲೂಕುಗಳ ಗೌರಮ್ಮ(25), ಗೀತಾ(20), ಮಹಾಂತೇಶ(18), ಮಂಜಮ್ಮ(30), ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ (35) ಹಾಗೂ ಭರತ್ (1) ಸ್ಥಳದಲ್ಲಿಯೇ ಮೃತಪಟ್ಟರೆ, ಕೂಡ್ಲಿಗಿ ತಾಲೂಕಿನ ಮರ್ಲಾನಹಳ್ಳಿಯ ಮಾಯಾ (16) ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಸುನೀಗಿದರು.

ಎಂಟು ಜನ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ, ನಾಲ್ವರನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಒಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

‘ಜಾತ್ರೆಗೆ ಟ್ರ್ಯಾಕ್ಟರ್ನಲ್ಲಿ ಹೊರಟಿದ್ದ ಭಕ್ತರು ಮೃತಪಟ್ಟಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಟ್ಯಾಂಕರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ’ ಎಂದು ಬಳ್ಳಾರಿ ವಲಯದ ಐಜಿಪಿ ಪಿ.ಎಸ್. ಹರ್ಷ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ತಲಾ ₹5 ಲಕ್ಷ ಪರಿಹಾರ: ರಸ್ತೆ ಅಘಘಾತದಲ್ಲಿ ಮೃತಪಟ್ಟ ಆರು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ನೀಡಲಾಗುವುದು ಎಂದು ಸಂಸದ ಇ.ತುಕಾರಾಂ ತಿಳಿಸಿದರು. ‘ಅಪಘಾತದ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿರುವೆ. ತಕ್ಷಣ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ’ ಎಂದು ಅವರು ತಿಳಿಸಿದರು. ‘ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸಲಿದ್ದೇನೆ. ಕಂಪನಿಗಳ ಸಿಎಸ್ಆರ್ ನಿಧಿಯಡಿ ಗರಿಷ್ಠ ₹1 ಲಕ್ಷವರೆಗೂ ವೆಚ್ಚ ಭರಿಸಲು ಅವಕಾಶ ಇದೆ’ ಎಂದು ಸಂಸದರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1546474171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.