ನವದೆಹಲಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುವ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳು 2015-16ರಿಂದ ಇಲ್ಲಿಯವರೆಗೆ ₹560 ಕೋಟಿ ನಷ್ಟ ಅನುಭವಿಸಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯೆ ಜೆಬಿ ಮಾಥೂರ್ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಇಲಾಖೆಯ ರಾಜ್ಯ ಸಚಿವ ಮುರಳೀಧರ್ ಮೊಹೊಲ್, ‘ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ ಹಾಗೂ ಮೈಸೂರು ನಿಲ್ದಾಣಗಳಿಗೆ ಭಾರಿ ನಷ್ಟ ಆಗಿದೆ’ ಎಂದರು.

‘2024-25ನೇ ಸಾಲಿನಲ್ಲಿ ದೇಶದ 81 ವಿಮಾನ ನಿಲ್ದಾಣಗಳು ನಷ್ಟ ಕಂಡಿವೆ. ಕಳೆದ ಹತ್ತು ವರ್ಷಗಳಲ್ಲಿ ಈ ವಿಮಾನ ನಿಲ್ದಾಣಗಳು ಅನುಭವಿಸಿದ ಒಟ್ಟು ನಷ್ಟ ₹10,852.9 ಕೋಟಿ. ದೆಹಲಿಯ ಸಫ್ದರ್ಜಂಗ್ ವಿಮಾನ ನಿಲ್ದಾಣ ಗರಿಷ್ಠ ನಷ್ಟ ಅನುಭವಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.