ಆಶಾಕಿರಣ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕಣ್ಣಿನ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯದಾದ್ಯಂತ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ
ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
4.3 ಲಕ್ಷ ಜನರಿಗೆ ಕನ್ನಡಕ
ಯೋಜನೆಯಡಿ ದೃಷ್ಟಿ ಸಮಸ್ಯೆ ಎದುರಿಸುತ್ತಿರುವವರಿಗೆ ಉಚಿತವಾಗಿ ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ. ತಪಾಸಣೆಗೆ ಒಳಪಟ್ಟವರಲ್ಲಿ 4.3 ಲಕ್ಷ ಜನರಿಗೆ ಕನ್ನಡಕ ನೀಡಲಾಗಿದೆ. ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ನೇತ್ರಾಧಿಕಾರಿಗಳು ಪರಿಶೀಲಿಸಿ ಕನ್ನಡಕ ಒದಗಿಸುತ್ತಾರೆ. ಮಕ್ಕಳಲ್ಲಿನ ದೃಷ್ಟಿ ಸಮಸ್ಯೆಗೆ ಸಂಬಂಧಿಸಿದಂತೆ ಇಲಾಖೆಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ (ಆರ್‌ಬಿಎಸ್‌ಕೆ) ತಪಾಸಣೆ ನಡೆಸಲಾಗುತ್ತಿದೆ. ಸಮಸ್ಯೆ ಪತ್ತೆಯಾದ ಮಕ್ಕಳಿಗೆ ಹೆಚ್ಚಿನ ನೇತ್ರ ತಪಾಸಣೆ ನಡೆಸಿ ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ.