ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮರಳಿ ತಾಯ್ನಾಡಿಗೆ’ ಯೋಜನೆ ಜಾರಿ: ರಾಜ್ಯಪಾಲ ಗೆಹಲೋತ್‌

Last Updated 14 ಫೆಬ್ರುವರಿ 2022, 20:43 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶದಲ್ಲಿರುವ ಭಾರತೀಯರ ಜ್ಞಾನವನ್ನು ಇಲ್ಲಿ ಬಳಸಿಕೊಳ್ಳುವುದಕ್ಕಾಗಿ ‘ಮರಳಿ ತಾಯ್ನಾಡಿಗೆ’ ಎಂಬ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪ್ರಕಟಿಸಿದರು.

ವಿಧಾನಮಂಡಲದಲ್ಲಿ ಸೋಮವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಮರಳಿ ತಾಯ್ನಾಡಿಗೆ ಯೋಜನೆಯ ಅನುಷ್ಠಾನಕ್ಕೆ ಸೂಕ್ತ ನೀತಿ ರೂಪಿಸಲಾಗುವುದು ಮತ್ತು ಅನುದಾನವನ್ನೂ ಬಿಡುಗಡೆಗೊಳಿಸಲಾಗುವುದು’ ಎಂದರು.

ಆದ್ಯತಾ ವಲಯದ ಕುಟುಂಬ (ಪಿಎಚ್‌ಎಚ್‌) ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ 5 ಕೆ.ಜಿ. ಆಹಾರ ಧಾನ್ಯವನ್ನು ವಿತರಣೆ ಮಾಡಲಾಗುತ್ತಿದೆ. ಏಪ್ರಿಲ್‌ 1ರಿಂದ ರಾಜ್ಯ ಸರ್ಕಾರ ಕೂಡ ಹೆಚ್ಚುವರಿಯಾಗಿ ತಲಾ 1 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ₹ 9 ಕೋಟಿ ವೆಚ್ಚದಲ್ಲಿ 20 ಅಡಿ ಎತ್ತರದ ಅಕ್ಕಮಹಾದೇವಿ ಪ್ರತಿಮೆ, ಪ್ರವಾಸಿಗರ ತಂಗುದಾಣ ಮತ್ತು ಉದ್ಯಾನ ನಿರ್ಮಿಸಲಾಗುವುದು. ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT