ಬೆಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಜಂಟಿ ಅಧಿವೇಶನದ ಎರಡನೇ ದಿನವಾದ ಇಂದು (ಗುರುವಾರ) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ತಾವೇ ಸಿದ್ಧಪಡಿಸಿದ್ದ ಒಂದು ನಿಮಿಷದ ಭಾಷಣವನ್ನು ಓದಿ ಸದನದಿಂದ ಹೊರನಡೆಯುತ್ತಿದ್ದಾಗ ಕಾಂಗ್ರೆಸ್ ಸದಸ್ಯರು ಅವರನ್ನು ಅಡ್ಡಗಟ್ಟಿದ ವಿಚಾರವನ್ನು ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ನಲ್ಲಿ ವಿಡಿಯೊ ಜೊತೆಗೆ ಪೋಸ್ಟ್ ಹಂಚಿಕೊಂಡಿರುವ ಅವರು, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನು ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ.

ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಆ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವ ಅರ್ಹತೆ ಇಲ್ಲ ಎಂದಿದ್ದಾರೆ.

ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಖುರ್ಷಿದ್ ಆಲಂ ಖಾನ್ ಹಾಗೂ ಹಂಸರಾಜ್ ಭಾರದ್ವಾಜ್ ಅವರು ಈ ರೀತಿ ಮಾಡಿರುವ ಉದಾಹರಣೆಗಳಿವೆ. ಆಗಲೂ ಸಹ ಅವರ ಭಾಷಣದ ನಂತರ ಸಂಪ್ರದಾಯದಂತೆ ರಾಷ್ಟ್ರಗೀತೆ ಹಾಡಿ ಗೌರವಯುತವಾಗಿ ಬೀಳ್ಕೊಡಲಾಗಿತ್ತು. ಆದರೆ, ಇಂದು ರಾಜ್ಯಪಾಲರು ಭಾಷಣ ಮಂಡಿಸಿದ ನಂತರ ರಾಷ್ಟ್ರಗೀತೆಯನ್ನೂ ನುಡಿಸಲಿಲ್ಲ. ರಾಜ್ಯಪಾಲರನ್ನು ಗೌರವಯುತವಾಗಿ ಬೀಳ್ಕೊಡಲೂ ಇಲ್ಲ. ಇದು ಸಂವಿಧಾನ, ರಾಜ್ಯಪಾಲರ ಹುದ್ದೆ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ನಮ್ಮ ರಾಷ್ಟ್ರಗೀತೆಗೆ ಮಾಡಿರುವ ಘೋರ ಅಪಮಾನ ಎಂದು ಾಕ್ರೋಶ ಹೊರ ಹಾಕಿದ್ದಾರೆ.

ಇನ್ನು ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರ ದುರ್ನಡತೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಂತಿತ್ತು. ಇಂದಿನ ಘಟನಾವಳಿಗಳು ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಸದನದ ಗೌರವಕ್ಕೆ ಚ್ಯುತಿ ತರುವ ರೀತಿ ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.
.ಸರ್ಕಾರದ ಭಾಷಣಕ್ಕೆ ಕೊಕ್; ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.