ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಕಾಂಗ್ರೆಸ್ ಹೋರಾಟ

Last Updated 14 ಫೆಬ್ರುವರಿ 2022, 20:11 IST
ಅಕ್ಷರ ಗಾತ್ರ

ಬೆಂಗಳೂರು: ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ತೀವ್ರ ಹೋರಾಟ ನಡೆಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಬಿಟ್‌ ಕಾಯಿನ್‌ ಹ್ಯಾಕಿಂಗ್‌ ಹಗರಣ, ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪ ಸೇರಿದಂತೆ ಹಲವು ವಿಷಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು
ಇಕ್ಕಟ್ಟಿಗೆ ಸಿಲುಕಿಸಲುತೀರ್ಮಾನಿಸಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ‘ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ ₹ 50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ನಯಾಪೈಸೆಯನ್ನೂ ನೀಡಿಲ್ಲ. ಈ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ್ದೇವೆ. ಈ ವಿಷಯವನ್ನು ಎರಡೂ ಸದನಗಳಲ್ಲಿ ಪ್ರಸ್ತಾಪಿಸಿ,
ಹೋರಾಟ ನಡೆಸಲು ನಿರ್ಧರಿ
ಸಿದ್ದೇವೆ’ ಎಂದರು.

ಗುತ್ತಿಗೆದಾರರ ಸಂಘವು ಸರ್ಕಾರದ ವಿರುದ್ಧ ಮಾಡಿರುವ ಕಮಿಷನ್‌ ಆರೋಪ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಷಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT