ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ @BSBommai ಅವರು ಮತ್ತು @BJP4Karnataka ಪಕ್ಷ ಏನೇ ಹೇಳಲಿ ಸ್ಪಷ್ಟಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ. 1/8#Delhi
— Siddaramaiah (@siddaramaiah) June 30, 2022
ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ ಅತ್ಯಂತ ಖಂಡನೀಯ ಕೃತ್ಯ. ಕೊಲೆಯಾದ ದಿನವೇ ಇದನ್ನು ಹೇಳಿದ್ದೇನೆ. ಈ ರೀತಿ ತಲೆ ಕತ್ತರಿಸುವ ದುಷ್ಕರ್ಮಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ರಾಜಸ್ತಾನ ಸರ್ಕಾರ ಖಂಡಿತ ಆರೋಪಿಗಳಿಗೆ ತಕ್ಷ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುವ ಭರವಸೆ ಇದೆ. 2/8#Delhi
— Siddaramaiah (@siddaramaiah) June 30, 2022
ನಾನೆಂದೂ ಹುಟ್ಟುಹಬ್ಬವನ್ನು ಬಹಿರಂಗವಾಗಿ ಆಚರಿಸಿದವನಲ್ಲ, ಈ ಬಾರಿ 75 ವರ್ಷ ಪೂರ್ಣಗೊಳಿಸಲಿರುವ ಕಾರಣ ಸ್ನೇಹಿತರು ಮತ್ತು ಅಭಿಮಾನಿಗಳು ಆಚರಣೆ ಮಾಡುತ್ತಿದ್ದಾರೆ. ನಮ್ಮ ನಾಯಕರಾದ @RahulGandhi ಅವರೇ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕಾರಣ ವಿಶೇಷ ಸಂದರ್ಭವಾಗಿದ್ದು ನಾನೂ ಭಾಗವಹಿಸುತ್ತಿದ್ದೇನೆ. 3/8#Delhi
— Siddaramaiah (@siddaramaiah) June 30, 2022
ನಾನು ಸಾಮಾಜಿಕ ನ್ಯಾಯ, ಅಹಿಂದ ವರ್ಗ ಮತ್ತು ಬಡವರ ಪರವಾಗಿ ಇರುವವನು, ಸರ್ವರು ಸಮಾನ ಮತ್ತು ನ್ಯಾಯಬದ್ಧ ಅವಕಾಶ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಆಶಯದೊಂದಿಗೆ ನಾನು ಹೋರಾಟ ಮಾಡುತ್ತಾ ಬಂದವನು. ಯಾರು ಏನೇ ಹೇಳಿದರೂ ಈ ವಿಷಯದಲ್ಲಿ ರಾಜಿ ಇಲ್ಲ. 4/8#Delhi
— Siddaramaiah (@siddaramaiah) June 30, 2022
ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ @BJP4Karnataka ಅವರು ಹೊತ್ತುಕೊಂಡು ಹೋಗುತ್ತಾರೆ. 5/8#Delhi
— Siddaramaiah (@siddaramaiah) June 30, 2022
ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ @BJP4Karnataka ಅಭ್ಯರ್ಥಿ ಯಾರು? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ. 6/8#Delhi
— Siddaramaiah (@siddaramaiah) June 30, 2022
ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ. 7/8#Delhi
— Siddaramaiah (@siddaramaiah) June 30, 2022
ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ. 8/8#Delhi
— Siddaramaiah (@siddaramaiah) June 30, 2022
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.