ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ತಡೆಯಲು ಯಾರಿಗೂ ಸಾಧ್ಯವಿಲ್ಲ: ವರ್ತೂರು ಪ್ರಕಾಶ್

ನಾನು ಹೈವೋಲ್ಟೇಜ್ ವಿದ್ಯುತ್ ತಂತಿ ಇದ್ದಂತೆ: ವರ್ತೂರು ಪ್ರಕಾಶ್‌
Last Updated 18 ಜನವರಿ 2023, 23:29 IST
ಅಕ್ಷರ ಗಾತ್ರ

ಕೋಲಾರ: ‘ಸಿದ್ದರಾಮಯ್ಯ ವಿರುದ್ಧ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಡವೆಂದು ನನಗೆ ಹೇಳಲು ಕುರುಬ ಸಮುದಾಯದ ಸ್ವಾಮೀಜಿ ಸೇರಿದಂತೆ ಯಾರಿಗೂ ಸಾಧ್ಯವಿಲ್ಲ’ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿ ವರ್ತೂರು ಪ್ರಕಾಶ್‌ ತಿಳಿಸಿದರು.

‘ಸಿದ್ದರಾಮಯ್ಯ ಕಡೆಯವರು ಮತ್ತು ಸ್ವಾಮೀಜಿ ಒತ್ತಡಕ್ಕೆ ಮಣಿದು ರಾಜಿ ಮಾಡಿಕೊಂಡು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ, ಸ್ಪರ್ಧಿಸಿದರೂ ತಟಸ್ಥವಾಗುತ್ತೇನೆ ಎಂದೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹ ಹಬ್ಬಿಸುತ್ತಿದ್ದಾರೆ. ಈ ಮೂಲಕ ನನ್ನನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಇವೆಲ್ಲಾ ವಾಸ್ತವಕ್ಕೆ ದೂರವಿದ್ದು, ನನ್ನ ಮನವೊಲಿಕೆಗೆ ಯಾರೂ ಪ್ರಯತ್ನಿಸಿಲ್ಲ. ನಾನು ಹೈವೋಲ್ಟೇಜ್ ವಿದ್ಯುತ್ ತಂತಿ ಇದ್ದಂತೆ. ನನ್ನನ್ನು ದಾರಿ ತಪ್ಪಿಸಲು ಅಥವಾ ಮನವೊಲಿಕೆಗೆ ಬರುವವರು ಸುಟ್ಟು ಭಸ್ಮವಾಗುತ್ತಾರೆ’ ಎಂದು ಅವರು ಎಚ್ಚರಿಕೆ ನೀಡಿದರು.

‘ಜ.9ರವರೆಗೆ ಸಿದ್ದರಾಮಯ್ಯ ಮೇಲೆ ಗೌರವವಿತ್ತು. ಆದರೆ, ಅವರದೇ ಸಮುದಾಯಕ್ಕೆ ಸೇರಿದ ನನ್ನ ವಿರುದ್ಧ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಅಂದು ಪ್ರಕಟಿಸಿದ ನಂತರ ಅವರ ಮೇಲಿದ್ದ ಗೌರವ ದೂರವಾಯಿತು. ರಮೇಶ್‌ ಕುಮಾರ್‌, ಎಂ.ಎಲ್‌.ಅನಿಲ್ ಕುಮಾರ್ ಮತ್ತಿತರರು ಕರೆತಂದರು ಎನ್ನುವುದಕ್ಕಿಂತ ನನ್ನನ್ನು ಚಿವುಟಿ ಹಾಕಲೆಂದೇ ಅವರು ಸ್ಪರ್ಧೆಗೆ ಮುಂದಾಗಿದ್ದಾರೆ’ ಎಂದು ಟೀಕಿಸಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಹಳ್ಳಿ ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ನಡುಪಳ್ಳಿ ಕೃಷ್ಣಮೂರ್ತಿ, ಬೆಗ್ಲಿ ಸೂರ್ಯಪ್ರಕಾಶ್‌ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT