ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ, ‘ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ’ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಓದಿ...

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ:9 ಮಂದಿ ಆರೋಪಿಗಳ ಬಂಧನ

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು

ಸಾವರ್ಕರ್ ಹೋರಾಟ: ಮುಖ್ಯಮಂತ್ರಿ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮಯ್ಯ ಕಿಡಿ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬೊಮ್ಮಾಯಿ ವಿರೋಧ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ: ಸಿಎಂ ಹೊಣೆ ಹೊರಲು ಡಿಕೆಶಿ ಆಗ್ರಹ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಇಂತಹ ಕೃತ್ಯ ಮರುಕಳಿಸಬಾರದು ಎಂದ ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.