ಸುವರ್ಣ ವಿಧಾನಸೌಧ (ಬೆಳಗಾವಿ): ‘ರಾಜ್ಯ ಸರ್ಕಾರದ ಹೊಸ ಕೈಗಾರಿಕಾ ನೀತಿಯಿಂದ ಈವರೆಗೆ 93,925 ಉದ್ಯೋಗಗಳು ಸೃಷ್ಟಿಯಾಗಿವೆ. ಎರಡೂವರೆ ವರ್ಷದಲ್ಲಿ ₹1.91 ಲಕ್ಷ ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಧಾನಪರಿಷತ್ನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, ‘2022-23ರಿಂದ 2025ರ ಅಕ್ಟೋಬರ್ವರೆಗೆ 1,886 ಹೂಡಿಕೆ ಯೋಜನೆಗಳಿಂದ 6.92 ಲಕ್ಷ ಉದ್ಯೋಗಗಳನ್ನು ನಿರೀಕ್ಷಿಸಲಾಗಿದೆ. ಈ ಪೈಕಿ 67 ಯೋಜನೆಗಳಿಂದ 93,925 ಉದ್ಯೋಗಗಳು ಸೃಷ್ಟಿಯಾಗಿವೆ’ ಎಂದು ಮಾಹಿತಿ ನೀಡಿದರು.

‘ಹೊಸ ಕೈಗಾರಿಕಾ ನೀತಿ 2025-2030 ಜಾರಿಗೆ ತಂದ ನಂತರ 93 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ₹5.50 ಲಕ್ಷ ಕೋಟಿ ಹೂಡಿಕೆ ಮತ್ತು 8.76 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.