ಬೆಂಗಳೂರು: ಉಪ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಡಿಸೆಂಬರ್ 7ರಿಂದ 15 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಜಯನಗರ ಹೊಸ ಜಿಲ್ಲೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ.

ಸಚಿವ ಶ್ರೀರಾಮುಲು ಮಾತನಾಡಿ, ‘ಪರಿಶಿಷ್ಟರ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಾಯ ಇತ್ತು. ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯ ಸಾಧಕ ಬಾಧಕ ಚರ್ಚೆ ಮಾಡಲಾಗಿದೆ. ಮುಂದಿನ ತೀರ್ಮಾನಕ್ಕಾಗಿ ಸಂಪುಟ ಉಪ ಸಮಿತಿ ರಚಿಸಲಾಗಿದೆ’ ಎಂದರು.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ‘ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ ಮಾಡಲಾಗಿದೆ. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ₹500 ಕೋಟಿ ಕೆಂದ್ರದಿಂದ ಬಿಡುಗಡೆ ಆಗಿದೆ. ಇನ್ನೂ ಸರ್ಕಾರದಿಂದ ₹1000 ಕೋಟಿ ಖರ್ಚಿನ ಮೂಲಕ ಪರಿಹಾರ ಕ್ರಮಗಳನ್ನು ಮಾಡಲು ತೀರ್ಮಾನಿಸಲಾಗಿದೆ’ ಎಂದರು.

‘ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ಅಭಿವೃದ್ದಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ದಿ ನಿಗಮಕ್ಕೆ ಸಾಲ ಪಡೆಯಲು ಅನುಮತಿ ನೀಡಲಾಗಿದೆ. ಹೊಸಪೇಟೆಯಲ್ಲಿ ₹13 ಕೋಟಿ ಅಂದಾಜು ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ. ಎಸ್‌ಸಿಎಸ್‌ಟಿಗೆ ಮೀಸಲು ಪ್ರಮಾಣ ಹೆಚ್ಚಳ ನಿಗದಿಗೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ಸಿಎಂಗೆ ಅಧಿಕಾರವಿದೆ’ ಎಂದರು.

2021ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ. ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗಿದೆ.

ಮರಾಠಾ ಸಮುದಾಯ ಅಭಿವೃದ್ದಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ದಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅಭಿವೃದ್ದಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ₹1000 ಕೋಟಿ ಬಿಡುಗಡೆ ಮಾಡಿ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಾಡಲು ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ. ಮುಂದೆ ಅದಕ್ಕೆ ಹಣ ಮೀಸಲಿಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಸದ್ಯಕ್ಕಂತೂ ಅದಕ್ಕೆ ಹಣ ಮೀಸಲಿಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬರೀ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.