ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ಹಸು–ಕರು, ಮೇಕೆ, ಕುರಿ ಮತ್ತಿತರ ಜಾನುವಾರುಗಳನ್ನು ಮೇಯಿಸುವುದಕ್ಕೆ ನಿಷೇಧ ಹೇರಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿದ್ದಾರೆ ಎಂದು ಖಂಡ್ರೆ ಹೇಳಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷ ಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಟ್ಟಿದ್ದಾರೆ ಎಂದು ಅವರು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಾಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ಒಳಗಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಅವರು ಉಲ್ಲೇಖಿಸಿದ್ದಾರೆ.

ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ–ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶವಿಲ್ಲ. ಆದ್ದರಿಂದ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಮತ್ತು ಪರಿಸರವಾದಿಗಳು ಅಭಿಪ್ರಾಯಪಟ್ಟಿದ್ದಾರೆ. ಆದ ಕಾರಣ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.