ನವದೆಹಲಿ: ಬಿಟ್ ಕಾಯಿನ್ ಹಗರಣದಲ್ಲಿ ಭಾಗಿ ಆದವರ ಪೈಕಿ ಅನೇಕ ಕಾಂಗ್ರೆಸ್ ಮುಖಂಡರ ಹೆಸರುಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಇಲ್ಲಿನ ಕರ್ನಾಟಕ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರಲಿದೆ’ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಓದಿ:ಬಿಟ್ಕಾಯಿನ್: ಪ್ರಜಾವಾಣಿ ವಿಶೇಷ ವರದಿ ಉಲ್ಲೇಖಿಸಿ ಸಿಎಂ ಕೆಣಕಿದ ಸಿದ್ದರಾಮಯ್ಯ

ಪಾಪ ಪ್ರಿಯಾಂಕ್ ಖರ್ಗೆ ಅವರಿಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾದವರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ. ಅದರ ಬಗ್ಗೆ ಮೊದಲು ಚಿಂತನೆ ಮಾಡಲು ಹೇಳಿ ಎಂದು ಅವರು ಸಲಹೆ ನೀಡಿದರು.

‘ನಾನು ಈಗಾಗಲೇ ಅನೇಕ ಬಾರಿ ಹೇಳಿದ್ದೇನೆ. ಕಾಂಗ್ರೆಸ್ ಮುಖಂಡರು ಈ ಬಗ್ಗೆ ಚಿಂತನೆ ನಡೆಸಲಿ’ ಎಂದು ಅವರು ತಿಳಿಸಿದರು.

ಕೇಂದ್ರದ ಕೆಲವು ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಆಗಲು ದೆಹಲಿಗೆ ಬಂದಿರುವುದಾಗಿ ಅವರು ಹೇಳಿದರು.

ಓದಿ:ಬಿಟ್ಕಾಯಿನ್ ಹಗರಣ: ಸುಳಿವಿಗೆ ‘ಐ.ಪಿ ವಿಳಾಸ’ದ ಮೊರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.