ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ಅರವಿಂದ ಬೆಲ್ಲದ ಹೆಸರು ಮುಂಚೂಣಿಗೆ ಬಂದಿದೆ.

ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಆಯ್ಕೆಮಾಡುವ ಪ್ರಕ್ರಿಯೆ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ.

ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಬೆಂಗಳೂರು ತಲುಪಿದ್ದಾರೆ. ಪಕ್ಷದ ರಾಜ್ಯ ಘಟಕದ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಕೂಡ ಬಂದಿದ್ದಾರೆ.

ಕೇಂದ್ರದಿಂದ ಬಂದಿರುವ ಮೂವರು ನಾಯಕರೂ ಯಡಿಯೂರಪ್ಪ ಅವರನ್ನು ಭೇಟಿಮಾಡಿ, ವಾಪಸಾಗಿದ್ದಾರೆ. ರಾತ್ರಿ 7 ಗಂಟೆಗೆ ಸಭೆ ಆರಂಭವಾಗಲಿದ್ದು, ಅಲ್ಲಿಯೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಬುಧವಾರವೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭವೂ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಲಾಬಿ ಮಾಡಿಲ್ಲ: ಮುರುಗೇಶ್ ನಿರಾಣಿ | Prajavani

ಮುಖ್ಯಮಂತ್ರಿ ಆಯ್ಕೆಗೆ ಹಲವರ ಹೆಸರುಗಳು ಪರಿಶೀಲನೆಯಲ್ಲಿವೆ. ಲಿಂಗಾಯತ ಸಮುದಾಯದವರಿಗೇ ಮುಖ್ಯಮಂತ್ರಿ ಹುದ್ದೆ ನೀಡುವ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅಥವಾ ಅರವಿಂದ ಬೆಲ್ಲದ ಅವರ ನಡುವೆ ಒಬ್ಬರನ್ನು ಆಯ್ಕೆಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಂಸದ ಶಿವಕುಮಾರ ಉದಾಸಿ, ಶಾಸಕ ಮುರುಗೇಶ ನಿರಾಣಿ ಸೇರಿದಂತೆ ಹಲವರ ಹೆಸರುಗಳು ಚರ್ಚೆಗೆ ಬಂದಿದ್ದವು.

ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಶದೀಯ ಮಂಡಳಿ ನಿರ್ಧಾರ ಕೈಗೊಂಡು, ವೀಕ್ಷಕರ ಮೂಲಕ ಸಂದೇಶ ರವಾನಿಸಿದೆ. ವೀಕ್ಷಕರು ತಂದಿರುವ ಸಂದೇಶಕ್ಕೆ ಪೂರಕವಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.